ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇದೇ ಅಕ್ಟೋಬರ್.9ರಂದು ತೆರೆಯಲಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್ ಪ್ಯಾಕೇಜ್, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಅಕ್ಟೋಬರ್.9ರಂದು ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿಯ ಬಾಗಿಲು ತೆರೆಯಲಿದ್ದು, ಅಕ್ಟೋಬರ್.23ರಂದು ಮುಚ್ಚಲಾಗುತ್ತದೆ.
ಇದನ್ನೂ ಓದಿ:-ರಾಜ್ಯದಲ್ಲಿ ಅಕ್ಟೋಬರ್.12ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ
ಇನ್ನು ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಹಾಸನಾಂಬ ದೇವಿಯ ಒಡವೆಗಳನ್ನು ಇಂದು ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ದೇವಾಲಯಕ್ಕೆ ರವಾನಿಸಲಾಯಿತು.
ದೇವಾಲಯದ ಪ್ರಧಾನ ಅರ್ಚಕ ನಾಗರಾಜ್ ಅವರ ನೇತೃತ್ವದಲ್ಲಿ ದೇವಿಯ ಆಭರಣಗಳನ್ನು ಗರ್ಭಗುಡಿಗೆ ತಲುಪಿಸಲಾಯಿತು. ಅಕ್ಟೋಬರ್.9ರಂದು ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ಅಕ್ಟೋಬರ್.23ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…