ಹಾಸನ

ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಬಾಗಿಲು ಓಪನ್‌

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇದೇ ಅಕ್ಟೋಬರ್.‌9ರಂದು ತೆರೆಯಲಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್‌ ಪ್ಯಾಕೇಜ್‌, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ಅಕ್ಟೋಬರ್.‌9ರಂದು ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿಯ ಬಾಗಿಲು ತೆರೆಯಲಿದ್ದು, ಅಕ್ಟೋಬರ್.‌23ರಂದು ಮುಚ್ಚಲಾಗುತ್ತದೆ.

ಇದನ್ನೂ ಓದಿ:-ರಾಜ್ಯದಲ್ಲಿ ಅಕ್ಟೋಬರ್.‌12ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ

ಇನ್ನು ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಹಾಸನಾಂಬ ದೇವಿಯ ಒಡವೆಗಳನ್ನು ಇಂದು ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ದೇವಾಲಯಕ್ಕೆ ರವಾನಿಸಲಾಯಿತು.

ದೇವಾಲಯದ ಪ್ರಧಾನ ಅರ್ಚಕ ನಾಗರಾಜ್‌ ಅವರ ನೇತೃತ್ವದಲ್ಲಿ ದೇವಿಯ ಆಭರಣಗಳನ್ನು ಗರ್ಭಗುಡಿಗೆ ತಲುಪಿಸಲಾಯಿತು. ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ಅಕ್ಟೋಬರ್.‌23ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

47 mins ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

50 mins ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

51 mins ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

53 mins ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

56 mins ago