Mysore
24
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್‌ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆಗೆ ಕ್ಯಾಪ್ಟನ್‌ ಕಾಡಾನೆ ಸಹ ಇತ್ತು. ಈ ವೇಳೆ ಕುಮ್ಕಿ ಆನೆಗಳೊಂದಿಗೆ ತೆರಳಿ ನರಹಂತಕ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಯಿತು.

ಈ ವೇಳೆ ಸ್ವಲ್ಪ ದೂರ ಓಡಿದ ಕಾಡಾನೆ ಪ್ರಜ್ಞೆತಪ್ಪಿ ಬಿದ್ದಿತು. ಈ ವೇಳೆ ಕುಮ್ಕಿ ಆನೆಗಳು ಅದನ್ನು ಸುತ್ತುವರಿದವು. ಬಳಿಕ ಕಾಡಾನೆಹೆ ನೀರು ಹಾಕಿ ಆರೈಕೆ ಮಾಡಿ ಹಗ್ಗದಲ್ಲಿ ಕಟ್ಟಲಾಯಿತು.

ನರಹಂತಕ ಕಾಡಾನೆ ಸೆರೆಯಿಂದ ಬೇಲೂರು ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

 

Tags:
error: Content is protected !!