ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು.
ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. ತೆರೆದ ವಾಹನದಲ್ಲಿ ಜಿಟಿ ಜಿಟಿ ಮಳೆಯ ನಡುವೆಯೂ ದಸರಾ ದೀಪಾಲಂಕಾರ ಮಾದರಿಯ ಲೈಟಿಂಗ್ಸ್ ವೀಕ್ಷಣೆ ಮಾಡಿ ಜನರತ್ತ ಕೈಬೀಸಿ ಕರೆದರು.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ತಾಯಿ ಹಾಸನಾಂಬೆಯ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.