Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬೇಲೂರಿನಲ್ಲಿ ಬೆಳ್ಳಂಬೆಳಿಗ್ಗೆಯೇ ಪ್ರತ್ಯಕ್ಷವಾಗಿದ್ದ 20ಕ್ಕೂ ಹೆಚ್ಚು ಕಾಡಾನೆಗಳು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ, ಜನರಲ್ಲಿ ಆತಂಕ ಮೂಡಿಸಿದ್ದವು.

ಬಿಕ್ಕೋಡು ಗ್ರಾಮದ ತಾವರೆಕರೆಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು ಒಂದು ಗಂಟೆಗೂ ಹೆಚ್ಚು ಕಾಲ ಜಲಕ್ರೀಡೆಯಾಡಿ ಬಳಿಕ ರೈತರ ಜಮೀನಿಗೆ ನುಗ್ಗಿ ಬೆಳೆಯನ್ನು ನಾಶಪಡಿಸಿವೆ.

ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರ ಹೆಚ್ಚಾಗಿದ್ದು, ಕಾಫಿ, ಬಾಳೆ, ಭತ್ತ, ಶುಂಠಿ ಸೇರಿದಂತೆ ರೈತರು ಬೆಳೆದ ಎಲ್ಲಾ ಬೆಳೆಗಳನ್ನು ತುಳಿದು ನಾಶಪಡಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂದು ಅಳಲು ತೋಡಿಕೊಂಡಿರುವ ರೈತರು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಂಜೆಯಾದರೆ ಸಾಕು ಕಾಫಿ ತೋಟದಲ್ಲೇ ಕಾಡಾನೆಗಳ ಹಿಂಡು ಲಗ್ಗೆಯಿಡುತ್ತಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಟ್ಟು ಆನೆಗಳನ್ನು ಕಾಡಿಗೆ ಓಡಿಸಿದ್ದಾರೆ.

 

Tags: