Mysore
17
clear sky

Social Media

ಗುರುವಾರ, 29 ಜನವರಿ 2026
Light
Dark

ಇಂದು ಮಧ್ಯಾಹ್ನ ಹಾಸನಾಂಬೆ ದೇವಾಲಯ ಬಂದ್‌

ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ನಿನ್ನೆ ಸಂಪನ್ನಗೊಂಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ದೇವಾಲಯ ಬಂದ್‌ ಆಗಲಿದೆ.

ಈ ಬಾರಿ 13 ದಿನಗಳ ಕಾಲ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ನಿನ್ನೆಯವರೆಗೂ 26 ಲಕ್ಷ ಜನರು ಹಾಸನಾಂಬೆ ದರ್ಶನ ಪಡೆದು ಪುನೀತರಾಗಿದ್ದಾರೆ.

ಈ ಬಾರಿ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿದ್ದ ಹಿನ್ನೆಲೆಯಲ್ಲಿ ಪ್ರತಿದಿನ ಲಕ್ಷಾಂತರ ಮಂದಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದಿದ್ದಾರೆ.

ಇನ್ನು ಈ ಬಾರಿ ದರ್ಶನ ಟಿಕೆಟ್‌ ಮೂಲಕವೇ ಹಾಸನಾಂಬೆ ದೇವಸ್ಥಾನಕ್ಕೆ 22 ಕೋಟಿ ರೂಪಾಯಿ ಆದಾಯ ಬಂದಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಿಶೇಷ ಪೂಜಾ-ಕೈಂಕರ್ಯಗಳೊಂದಿಗೆ ಹಾಸನಾಂಬೆ ದೇವಸ್ಥಾನದ ಬಾಗಿಲು ಬಂದ್‌ ಮಾಡಲಾಗುತ್ತದೆ.

Tags:
error: Content is protected !!