ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಸಂಜೆ ವೇಳೆಗೆ ಭರ್ಜರಿ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಹಾಸನ ಜಿಲ್ಲೆಯ ನಾನಾ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.
ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ನೀರು ನದಿಯಂತೆ ಹರಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಹಾಸನ ಜಿಲ್ಲೆಯಾದ್ಯಂತ ಅನ್ನದಾತರು ಯತೇಚ್ಛವಾಗಿ ಜೋಳ ಬೆಳೆಯಲಾಗಿದ್ದು, ಅದನ್ನು ಕೊಯ್ಲು ಮಾಡುವ ಸಂದರ್ಭದಲ್ಲಿ ಬಿಟ್ಟುಬಿಡದೇ ಮಳೆ ಸುರಿಯುತ್ತಿರುವುದು ರೈತರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.
ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಹಲವಡೆ ಗಾಳಿಯ ರಭಸಕ್ಕೆ ಮರಗಳು ಕೂಡ ಧರೆಗುರುಳಿವೆ. ಪರಿಣಾಮ ಕತ್ತಲಿನಲ್ಲೇ ಜನರು ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇಂದು ಸುರಿದ ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳಗಳು ಸಹ ತುಂಬಿ ಹರಿಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಹೀಗೇಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





