ಹಾಸನ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳಿಂದ ಒಂದಲ್ಲಾ ಒಂದು ಆರೋಪ ಕೇಳಿಬರುತ್ತಲೇ ಇದೆ.
ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಾಳೆ ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ ನಡೆಸಲು ಎಲ್ಲಾ ತಯಾರಿ ಮಾಡಿಕೊಂಡಿದೆ.
ಇನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಜನ ಕಲ್ಯಾಣ ಸಮಾವೇಶ ಎಂದು ಬ್ಯಾನರ್ ಹಾಕಲಾಗಿದೆ,
ನಾಳೆ ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದ್ದು, ಈಗಾಗಲೇ ಜಿಲ್ಲಾ ಹಲವು ನಾಯಕರು ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ನಾಳೆ ನಡೆಯುವ ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು 1500ಕ್ಕೂ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಿಂದಲೂ ಬಸ್‌ಗಳಲ್ಲಿ ಜನರನ್ನು ಕರೆತರಲು ಆಯಾಯ ಜಿಲ್ಲೆಗಳ ಮುಖಂಡರಿಗೆ ಜವಾಬ್ದಾರಿ ವಹಿಸಲಾಗಿದೆ.