ಹಾಸನ

ನಾಳೆ ಹಾಸನದಲ್ಲಿ ನಡೆಯಲಿರುವ ಜನಕಲ್ಯಾಣ ಸಮಾವೇಶ

ಹಾಸನ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳಿಂದ ಒಂದಲ್ಲಾ ಒಂದು ಆರೋಪ ಕೇಳಿಬರುತ್ತಲೇ ಇದೆ.

ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಾಳೆ ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ ನಡೆಸಲು ಎಲ್ಲಾ ತಯಾರಿ ಮಾಡಿಕೊಂಡಿದೆ.

ಇನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮತ್ತು ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಜನ ಕಲ್ಯಾಣ ಸಮಾವೇಶ ಎಂದು ಬ್ಯಾನರ್‌ ಹಾಕಲಾಗಿದೆ,

ನಾಳೆ ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೆ ಬೃಹತ್‌ ವೇದಿಕೆ ಸಿದ್ಧವಾಗಿದ್ದು, ಈಗಾಗಲೇ ಜಿಲ್ಲಾ ಹಲವು ನಾಯಕರು ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ನಾಳೆ ನಡೆಯುವ ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು 1500ಕ್ಕೂ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಿಂದಲೂ ಬಸ್‌ಗಳಲ್ಲಿ ಜನರನ್ನು ಕರೆತರಲು ಆಯಾಯ ಜಿಲ್ಲೆಗಳ ಮುಖಂಡರಿಗೆ ಜವಾಬ್ದಾರಿ ವಹಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

9 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

9 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

10 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

11 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

11 hours ago