ಹಾಸನ

ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿ : ತಿಂಗಳಲ್ಲಿ 14 ಮಂದಿ ಸಾವು

ಹಾಸನ : ಹಾಸನ ಮೂಲದ ಯುವ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸರಣಿ ಮುಂದುವರೆದಿದ್ದು, ನಿನ್ನೆ(ಜೂ.25) ಹಾಸನ ಮೂಲದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಇಂದು ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯ ಯುವಕ-ಯುವತಿ ಒಂದೇ ತಿಂಗಳಲ್ಲಿ ಹೃದಯಾಘಾತಕ್ಕೆ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಆಟೋ ಚಾಲಕ ಸಾವು
ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ 32 ವರ್ಷದ ಯೋಗೇಶ್‌ ಬೆಂಗಳೂರಿನಲ್ಲಿ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಆಟೋ ಓಡಿಸಿ ಮನೆಗೆ ಬಂದು ಮಲಗಿದ್ದಾರೆ. ಹೀಗಿದ್ದಾಗ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಆಸ್ಪತ್ರೆಗೆ ಕರೆದೊಯ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.

22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿ
ಹಾಸನ ಮೂಲದ ಕಟ್ಟಳ್ಳಿಯ ಯುವತಿ ರೂಪ(22) ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಬೆಂಗಳೂರಿನಲ್ಲಿ ವಾಸವಿರುವ ಯುವತಿ ನಿನ್ನೆ ಮನೆಯಲ್ಲಿಯೇ ಇದ್ದಳು. ಈ ವೇಳೆ ಸುಪ್ರಿಯಾಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾಳೆ. ಕೂಡಲೇ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಸುಪ್ರಿಯಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಖಚಿತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

5 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

7 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

7 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

8 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

8 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

8 hours ago