Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

ಹಣಕಾಸಿನ ವಿಚಾರಕ್ಕೆ ಗಲಾಟೆ : ಆಣೆ ಪ್ರಮಾಣ ಮಾಡಲು ಹೋಗಿ ಇಬ್ಬರು ನೀರು ಪಾಲು

ಹಾಸನ : ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರು (35) ಆನಂದ್ (30). ಹಣಕಾಸು ವ್ಯವಹಾರದ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಕಳೆದ ರಾತ್ರಿ ಗಂಗೆ ಮೇಲೆ ಆಣೆ ಮಾಡಲು ಕೆರೆ ಬಳಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶವವನ್ನ ಹೊರೆತೆಗೆಯಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!