Mysore
27
broken clouds
Light
Dark

ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ : 15ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನ : ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ.

ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಮಹಿಳಾ ಕಾರ್ಮಿಕರನ್ನು ಹಾರ್ಲೆ ಕಾಫಿ ತೋಟದ ಕೆಲಸಕ್ಕೆ ಪಿಕ್‌ಅಪ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ.

ಪಿಕ್‌ಅಪ್ ವಾಹನದಲ್ಲಿ 20ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿದ್ದು, ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಕಲೇಶಪುರ ಹಾಗೂ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ