ಹಾಸನ : ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ.
ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಮಹಿಳಾ ಕಾರ್ಮಿಕರನ್ನು ಹಾರ್ಲೆ ಕಾಫಿ ತೋಟದ ಕೆಲಸಕ್ಕೆ ಪಿಕ್‌ಅಪ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ.
ಪಿಕ್‌ಅಪ್ ವಾಹನದಲ್ಲಿ 20ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿದ್ದು, ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಕಲೇಶಪುರ ಹಾಗೂ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…