ಹಾಸನ: ವಕ್ಫ್ ವಿರುದ್ಧ ಹೋರಾಟ ಮಾಡುತ್ತಿರುವ ಬಿಜೆಪಿ ವಿರುದ್ಧ ಮುಖಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದರು.
ಜನ ಕಲ್ಯಾಣ ಸಮಾವೇಶದಲ್ಲಿ ಭಾಗಿಯಾಗುವ ಮುನ್ನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ರಾಜಕೀಯಕ್ಕಾಗಿ ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದೂರಿದರು.
೨೦೧೪ ರಲ್ಲಿ ಬಿಜೆಪಿ ಅವರು ಚುನಾವಣಾ ಪ್ರಣಾಳಿಕೆಯಲ್ಲಿ ಏನು ಭರವಸೆ ನೀಡಿದ್ದರು. ವಕ್ಫ್ ಆಸ್ತಿಯನ್ನು ಯಾರೆಲ್ಲಾ ಅತಿಕ್ರಮಣ ಮಾಡಿದ್ದಾರೋ ಅದೆಲ್ಲವನ್ನೂ ತೆರವು ಗೊಳಿಸುತ್ತೇವೆ ಎಂದಿದ್ದರು. ಈ ಹಿಂದೆ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಸಹ ಅದನ್ನೇ ಹೇಳಿದ್ದರು. ನಮಗಿಂತ ಹೆಚ್ಚು ನೋಟಿಸ್ ಕೊಟ್ಟಿರುವುದು ಬಿಜೆಪಿ ಅವರೇ ಎಂದು ಟಾಂಗ್ ನೀಡಿದರು.
ಅವರು ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಂಡಿಲ್ಲ. ಅದರ ಬಗ್ಗೆ ಈಗ ಏನನ್ನೂ ಮಾತನಾಡುತ್ತಿಲ್ಲ. ಆದರೀಗ ನಮ್ಮ ವಿರುದ್ಧ ಹೋರಾಟದ ನಾಟಕ ಆಡುತ್ತಿದ್ದಾರೆ. ಇದು ರಾಜಕೀಯ ಇಬ್ಬಂದಿತನ ಎಂದು ವಾಗ್ದಾಳಿ ನಡೆದಿರು.
ಇನ್ನೇನು ಚಳಿಗಾಲದ ಅಧಿವೇಶನ ಆರಂಭ ಆಗುತ್ತಿದೆ. ಅಲ್ಲಿ ಮಾತನಾಡಲು ಅವರಿಗೆ ವಿಷಯಗಳಿಲ್ಲ. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ನಾವು ಮೂರನ್ನೂ ಗೆದ್ದಿದ್ದೇವೆ. ೨೫ ವರ್ಷಗಳ ನಂತರ ಶಿಗ್ಗಾಂವಿಯಲ್ಲಿ ಜಯ ಸಾಧಿಸಿದ್ದೇವೆ. ಚನ್ನಪಟ್ಟಣದಲ್ಲೂ ಗೆದ್ದಿದ್ದೇವೆ. ಇದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ. ಅದಕ್ಕಾಗಿ ಅವರು ರಾಜಕೀಯ ನಾಟಕ ಶುರು ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.
ಇದೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತರರು ಉಪಸ್ಥಿತರಿದ್ದರು.
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…