Mysore
27
moderate rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹಾಸ್ಟೆಲ್‌ ಹಿಂಭಾಗ ಈ ದಾಳಿ ನಡೆದಿದ್ದು, ದಾಳಿಯಲ್ಲಿ ಗಾಯಗೊಂಡ ಗಾರ್ಡ್‌ ರಮೇಶ್‌ ಸ್ಥಿತಿ ಗಂಭೀರವಾಗಿದೆ. ಸಿಬ್ಬಂದಿ ವಿಶ್ವ ಹಾಗೂ ಜೀವನ್‌ ಅವರು ಸಹ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಮೂವರು ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Tags:
error: Content is protected !!