ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ ಪಟ್ಲ ಬೆಟ್ಟದಲ್ಲಿ ಟ್ರಕ್ಕಿಂಗ್ ಆರಂಭವಾದ ಹಿನ್ನೆಲೆಯಲ್ಲಿ ವಾಹನಗಳ ಶಬ್ಧಕ್ಕೆ ಗಜಪಡೆ ಬೇರೆಡೆಗೆ ಸ್ಥಳಾಂತರಗೊಂಡಿದ್ದವು.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಟ್ರಕ್ಕಿಂಗ್ ನಿಷೇಧ ಮಾಡಿತ್ತು. ವಾಹನಗಳ ಕಿರಿಕಿರಿ ಕಡಿಮೆಯಾದ ಪರಿಣಾಮ ಇದೀಗ ಬೆಟ್ಟಕ್ಕೆ ಹತ್ತಕ್ಕೂ ಹೆಚ್ಚು ಕಾಡಾನೆಗಳು ವಾಪಸ್ ಬಂದಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಪಟ್ಲ ಬೆಟ್ಟಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.





