ಹಾಸನ : ಕೆಲವೇ ದಿನಗಳಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ನಂಬಿಸಿ ಹಲವು ಮಹಿಳೆಯಿಂದ ಲಕ್ಷಾಂತರ ಹಣ ಪಡೆದು ಸುಮಾರು ರೂ. 3 ಕೋಟಿಗೂ ಅಧಿಕ ವಂಚನೆ ಮಾಡಿದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದಿರುವ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದಿದೆ.
ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ತನ್ನ ಮಗಳನ್ನು ವಿದೇಶದಲ್ಲಿ ಎಮ್ ಎಸ್ ಓದಿಸಬೇಕೆಂದೂ, ಕೋಟಿ ರೂ.ಗಳ ಮನೆ ಖರೀದಿಸಿದ್ದೇನೆಂದು ಹೇಳಿ ಹಣ ಕೇಳುತ್ತಿದ್ದಳು. ಅಲ್ಲದೇ ಕೊಡಚಾದ್ರಿ ಚಿಟ್ಸ್ನಲ್ಲಿ 1 ಕೋಟಿ ರೂ.ಗಳಿಗೂ ಅಧಿಕ ಚೀಟಿ ಹಾಕಿದ್ದೇನೆ, ಇದರಿಂದ ಕೆಲವೇ ತಿಂಗಳುಗಳಲ್ಲಿ ದುಪ್ಪಟ್ಟು ಹಣ ಬರಲಿದೆ ಎಂದು ನಕಲಿ ಸ್ಲಿಪ್ ತೋರಿಸಿ ಪರಿಚಯದ ಮಹಿಳೆಯರ ಬಳಿ ಸಾಲ ಕೇಳುತ್ತಿದ್ದಳು. ಹೀಗೆ ಹೇಮಾವತಿಯ ಬಣ್ಣ ಬಣ್ಣದ ಮಾತುಗಳಿಂದ ಮರುಳಾಗಿದ್ದ ಮಹಿಳೆಯರು ತಮ್ಮ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ಹಣವನ್ನು ಆಕೆಗೆ ನೀಡಿದ್ದರು ಎನ್ನಲಾಗಿದೆ.
ಇದನ್ನು ಓದಿ; ತೆಂಗಿನಕಾಯಿ ವ್ಯಾಪಾರಿಗೆ 49.47 ಲಕ್ಷ ವಂಚನೆ ; ಇಂಪೋರ್ಟ್ ಎಕ್ಸ್ಪೋರ್ಟ್ ವ್ಯಾಪಾರಿಯಿಂದ ಧೋಖಾ…
ಹತ್ತಾರು ವರ್ಷಗಳಿಂದ ಡ್ರೆಸ್ ಶಾಪ್ ನಡೆಸುತ್ತಿದ್ದ ಹೇಮಾವತಿಯು ತನ್ನ ನಿತ್ಯ ಗ್ರಾಹಕರನ್ನೇ ಗುರಿಯಾಗಿಸಿಕೊಂಡಿದ್ದರು. ಇನ್ನೂ ಓರ್ವ ಮಹಿಳೆಯಿಂದಲೇ 45 ಲಕ್ಷ ರೂ. ಹಣ ಪಡೆದು ವಂಚನೆ ಮಾಡಿರುವುದಾಗಿ ತಿಳಿದುಬಂದಿದೆ.
ವಂಚನೆಗೆ ಪತಿ ಸಾಥ್
ಹೆಂಡತಿ ವಂಚನೆಗೆ ಪತಿ ವಿರೂಪಾಕ್ಷಪ್ಪ ಸಾಥ್ ನೀಡಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ವಂಚನೆಗೊಳಗಾದ ಜನ ಮಹಿಳೆಯನ್ನು ರಸ್ತೆಯಲ್ಲಿ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…