ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.
ತುಮಕೂರು ಜಿಲ್ಲೆ ಕುಣಿಗಲ್‌ನಲ್ಲಿ ಪ್ರಿಯಾಂಕಾ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರಿನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಫೆಬ್ರವರಿ.12ರಂದು ರಾತ್ರಿ 8 ಗಂಟೆ ಸುಮಾರಿಗೆ ಬೇಲೂರು ಬಸ್ ನಿಲ್ದಾಣದಿಂದ ಕಾಣೆಯಾಗಿದ್ದರು. ಕುಟುಂಬದವರು ಆಕೆಯನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 373ರ ಕೆರೆಯ ಸಮೀಪ ಪ್ರಿಯಾಂಕಾ ಮೈಮೇಲೆ ಇದ್ದ 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಕೆರೆಗೆ ಎಸೆದಿರುವ ಶಂಕೆಯ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಹಾಯದಿಂದ ಕೆರೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.
ಇದೀಗ ಹಾಸನ ಗ್ರಾಮಾಂತರ ಠಾಣೆ ಹಾಗೂ ಬೇಲೂರು ಪೊಲೀಸರು ತನಿಖೆ ಕೈಗೊಂಡು ನಾಪತ್ತೆಯಾಗಿದ್ದ ಪ್ರಿಯಾಂಕಾಳನ್ನು ಪತ್ತೆ ಮಾಡಿದ್ದಾರೆ. ನಾಪತ್ತೆಯಾಗಿದ್ದ ಪ್ರಿಯಾಂಕಾ ಕುಣಿಗಲ್‌ನಲ್ಲಿ ಪತ್ತೆಯಾಗಿದ್ದಾರೆ.





