ಹಾಸನ

30 ಲಕ್ಷದ ಚಿನ್ನಾಭರಣ ಧರಿಸಿ ಮದುವೆಗೆ ಬಂದು ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್‌ ಗೆಳೆಯನ ಮನೆಯಲ್ಲಿ ಪತ್ತೆ

ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.

ತುಮಕೂರು ಜಿಲ್ಲೆ ಕುಣಿಗಲ್‌ನಲ್ಲಿ ಪ್ರಿಯಾಂಕಾ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರಿನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಫೆಬ್ರವರಿ.12ರಂದು ರಾತ್ರಿ 8 ಗಂಟೆ ಸುಮಾರಿಗೆ ಬೇಲೂರು ಬಸ್‌ ನಿಲ್ದಾಣದಿಂದ ಕಾಣೆಯಾಗಿದ್ದರು. ಕುಟುಂಬದವರು ಆಕೆಯನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 373ರ ಕೆರೆಯ ಸಮೀಪ ಪ್ರಿಯಾಂಕಾ ಮೈಮೇಲೆ ಇದ್ದ 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಕೆರೆಗೆ ಎಸೆದಿರುವ ಶಂಕೆಯ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಹಾಯದಿಂದ ಕೆರೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.

ಇದೀಗ ಹಾಸನ ಗ್ರಾಮಾಂತರ ಠಾಣೆ ಹಾಗೂ ಬೇಲೂರು ಪೊಲೀಸರು ತನಿಖೆ ಕೈಗೊಂಡು ನಾಪತ್ತೆಯಾಗಿದ್ದ ಪ್ರಿಯಾಂಕಾಳನ್ನು ಪತ್ತೆ ಮಾಡಿದ್ದಾರೆ. ನಾಪತ್ತೆಯಾಗಿದ್ದ ಪ್ರಿಯಾಂಕಾ ಕುಣಿಗಲ್‌ನಲ್ಲಿ ಪತ್ತೆಯಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

7 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

7 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

7 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

7 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

8 hours ago