ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ರಾಜ್ಯದ ನಾನಾ ಭಾಗದಿಂದ ಭಕ್ತರು, ಗಣ್ಯರು ಆಗಮಿಸುತ್ತಿದ್ದು, ಎಂಟನೇ ದಿನವಾದ ಶುಕ್ರವಾರವೂ ಭಕ್ತರ ಸಂಖ್ಯೆ ಹೆಚ್ಚಿತ್ತು. ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಸೇರಿದಂತೆ ಹಲವು ಗಣ್ಯರು ದೇವಿ ದರ್ಶನ ಪಡೆದರು.
ಕಳೆದ ಮೂರು ದಿನದಿಂದ ನಿತ್ಯ 30ರಿಂದ 40 ಸಾವಿರ ಭಕ್ತರು ದೇವಿ ದರ್ಶನಕ್ಕೆ ಬರುತ್ತಿದ್ದು, ರಾಜಕಾರಣಿಗಳು, ಗಣ್ಯರು, ನ್ಯಾಯಾಧೀಶರು, ಮಠಾಧೀಶರು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ, ಶಿವಗಂಗೆ ಬೆಟ್ಟದ ಮಲಯಮುನಿ ಶಾಂತವೀರ ಸ್ವಾಮೀಜಿ, ಬಸವ ಕಲ್ಯಾಣ ಮಠದ ಸದಾಶಿವ ಸ್ವಾಮೀಜಿ, ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಸುನಂದಾ ಪಾಲನೇತ್ರ ಮತ್ತಿತರರು ಆಗಮಿಸಿ ದರ್ಶನ ಪಡೆದರು.
ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ದೇವಾಲಯಕ್ಕೆ ಆಗಮಿಸಿ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿದರು
ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ…
ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್ ಪಾರ್ಟಿ ಮೂಲಕ…
ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…