ಜಿಲ್ಲೆಗಳು

ಹಳೇದ್ವೇಷ: ರೌಡಿಶೀಟರ್ ಕೊಲೆ

ವರದಿ: ಮೋಹನ್ ಬಿ.ಟಿ

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಭಾರತೀನಗರ ಸಮೀಪದ ದೊಡ್ಡರಸಿನಕೆರೆಯಲ್ಲಿ ನಡೆದಿದೆ.

ಗ್ರಾಮದ ಅರುಣ್ ಅಲಿಯಾಸ್ ಕಪ್ಪ (೨೩) ಎಂಬಾತನೇ ಹತ್ಯೆಯಾದ ರೌಡಿಶೀಟರ್. ಈತನ ಮೇಲೆ ಅದೇ ಗ್ರಾಮದ ದೊಡ್ಡಯ್ಯ (೨೫), ದೇವರಾಜು (೨೬) ಎಂಬುವರೇ ಹತ್ಯೆಗೈದ ಆರೋಪಿಗಳಾಗಿದ್ದಾರೆ.

ಘಟನೆ ವಿವರ:
ಹಳೇ ದ್ವೇಷದ ಹಿನ್ನೆಲೆಯಲ್ಲಿ ಅರುಣ ಹಾಗೂ ದೊಡ್ಡಯ್ಯ, ದೇವರಾಜು ಅವರ ನಡುವೆ ಭಾನುವಾರ ಸಂಜೆ ಗ್ರಾಮದಲ್ಲಿ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ ಕಾರಣ ಅರುಣನ ಮುಖ ಮತ್ತು ಇತರ ಕಡೆಗಳಿಗೆ ದೇವರಾಜು ಮತ್ತು ದೊಡ್ಡಯ್ಯ ಹಲ್ಲೆ ನಡೆಸಿದ್ದರು. ಹಲ್ಲೆಯಿಂದಾಗಿ ಅರುಣನ ಮುಖ, ಕೈಕಾಲುಗಳಿಗೆ ಗಾಯಗಳಾಗಿದ್ದವು. ಮೂಗಿನಿಂದ ರಕ್ತ ಸೋರುತ್ತಿತ್ತು. ಬಳಿಕ ಆತ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಬೈಕ್‌ನಲ್ಲಿ ಹೋಗುತ್ತಿದ್ದ.

ಬೈಕ್‌ನಲ್ಲಿ ಹೋಗುತ್ತಿದ್ದ ಅರುಣನನ್ನು ಹಿಂಬಾಲಿಸಿದ ದೊಡ್ಡಯ್ಯ ಹಾಗೂ ದೇವರಾಜು ಅವರು, ಎತ್ತಿನ ಗಾಡಿಯ ಚಕ್ರಕ್ಕೆ ಸಿಲುಕಿಸುವ ಕೊಂಡಿಯಿಂದ ಅರುಣನ ಮೇಲೆ ಹಲ್ಲೆ ನಡೆಸಿದರು. ತೀವ್ರವಾಗಿ ಗಾಯಗೊಂಡು ಅಸ್ವಸ್ಥನಾಗಿ ಕುಸಿದುಬಿದ್ದಿದ್ದ. ತಕ್ಷಣ ಸಾರ್ವಜನಿಕರು ಆತನನ್ನು ಭಾರತೀಗರದ ಜಿ. ಮಾದೇಗೌಡ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅರುಣ ಸೋಮವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ನೀಡಲಾಯಿತು. ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಈ ಸಂಬಂಧ ಕೆ.ಎಂ. ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

37 mins ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

54 mins ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

2 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

4 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

8 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

8 hours ago