ಜಿಲ್ಲೆಗಳು

ಎಚ್.ಡಿ.ಕೋಟೆ – ಸಾರಿಗೆ ಬಸ್ ಡಿಕ್ಕಿ; ರೈತ ಸಾವು

ಎಚ್.ಡಿ.ಕೋಟೆ: ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ರೈತನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಂಪಾಪುರದ ನಿವಾಸಿ ರಮೇಶ್ (62)) ಸಾವಿಗೀಡಾದವರು.

ಶನಿವಾರ ರಾತ್ರಿ ಜಮೀನಿನ ಕೆಲಸ ಮುಗಿಸಿಕೊಂಡು ಅಂಗಡಿಯಲ್ಲಿ ದಿನಸಿ ಪದಾರ್ಥ ತೆಗೆದುಕೊಂಡು ಹಂಪಾಪುರಕ್ಕೆ ಹೋಗುವ ಸಂದರ್ಭದಲ್ಲಿ ಹೊಮ್ಮರಗಳ್ಳಿ ಸರ್ಕಾರಿ ಶಾಲೆ ಮುಖ್ಯರಸ್ತೆಯ ಬದಿಯಲ್ಲಿ ಹೆಚ್.ಡಿ.ಕೋಟೆ ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.

ಕೂಡಲೇ ಚಾಲಕ ಬಸ್ಸನ್ನು ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದು ಪೊಲೀಸರು ವಿಚಾರಣೆಯನ್ನು ನಡೆಸಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದ್ದು, ಡಿಪೋಮ್ಯಾನೇಜರ್‌ ತ್ಯಾಗರಾಜು ಸ್ಥಳಕ್ಕೆ ಭೇಟಿ ನೀಡಿ ಮೇಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಾರೆ.

andolanait

Recent Posts

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

35 mins ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

6 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

6 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

6 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

6 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

6 hours ago