ಚನ್ನಪಟ್ಟಣ; ಗುದ್ದಾಟ ಗಮನಿಸಿದರೆ, ಸಿಪಿವೈ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ
ಚನ್ನಪಟ್ಟಣದಲ್ಲಿ ನಡೆದ ಅಭಿವೃದ್ಧಿ ಗಲಾಟೆ ವಿಚಾರ 2023 ರ ಚುನಾವಣೆ ಗುದ್ದಾಟಕ್ಕೆ ಮುನ್ನುಡಿ ಬರೆದಿದೆ! ಶನಿವಾರ ನಡೆದ ಗಲಾಟೆಯನ್ನು ಗಮನಿಸಿದರೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಹೇಗಿರಲಿದೆ ಎಂಬುದರ ಮುನ್ಸೂಚನೆಯಾಗಿದೆ. ಈ ಗುದ್ದಾಟವು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ನಡುವೆ ‘ನಾನಾ’ ‘ನೀನಾ’ ಕಾದಾಟದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ.
ಯಾರಿಗೆ ಪ್ಲಸ್? ಯಾರಿಗೆ ಮೈನಸ್ ?
ಈ ಗುದ್ದಾಟದ ತೀವ್ರತೆ ಗಮನಿಸಿದರೆ, ಸಿ. ಪಿ. ಯೋಗೇಶ್ವರ್ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಇಡೀ ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ. ಜೊತೆಯಲ್ಲೇ ಒಂದಷ್ಟು ಋಣಾತ್ಮಕ ಪರಿಣಾಮಗಳನ್ನೂ ಸಿ. ಪಿ. ಯೋಗೇಶ್ವರ್ ಎದುರಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಚುನಾವಣೆ ಸಮಯದಲ್ಲಿ ತಮ್ಮದೇ ಪಕ್ಷದ ನಾಯಕರಿಂದ ಸಿಪಿವೈ ಚೀಮಾರಿಗೆ ಒಳಗಾಗುವ ಸಾಧ್ಯತೆಯೂ ಇಲ್ಲದಿಲ್ಲ. ಎಲ್ಲಕ್ಕಿಂತಾ ಹೆಚ್ಚಾಗಿ ಸಚಿವ ಸಂಪುಟದ ವಿಸ್ತರಣೆ ಸಮಯದಲ್ಲಿ ಸಿಪಿವೈ ವಿರೋಧಿಗಳು ಇದೇ ಗಲಾಟೆಯನ್ನು ಅಸ್ತ್ರ ಮಾಡಿಕೊಂಡು ಸಿಪಿವೈಗೆ ಸ್ಥಾನ ತಪ್ಪಿಸಲು ಯತ್ನಿಸುವ ಸಾಧ್ಯತೆಗಳೂ ಇಲ್ಲದಿಲ್ಲ. ಹೀಗಾಗಿ, ಶನಿವಾರ ನಡೆದ ಹೈಡ್ರಾಮಾ, ಸಿಪಿವೈಗೆ ವರವೂ ಆಗಬಹುದು, ಶಾಪವೂ ಆಗಬಹುದು..!
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…