ಹನೂರು : ಮಹಿಳೆಯೊಬ್ಬರನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ದುರುಳ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲ್ಲೂಕಿನ ನಾಗಮಲೆ ಗ್ರಾಮದ ಲಕ್ಷ್ಮಿ ( 35) ಕೊಲೆಯಾದವರು. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಮೂಲತಃ ತಮಿಳುನಾಡಿನ ಪೆನ್ನಾಗರಂ ನಿವಾಸಿ ಲಕ್ಷ್ಮಿಯನ್ನು ಕಳೆದ 7 ತಿಂಗಳ ಹಿಂದೆ ನಾಗಮಲೆ ಗ್ರಾಮದ ರಮೇಶ್ ಎಂಬಾತ ಕೂಡಾವಳಿ ವಿವಾಹ ಮಾಡಿಕೊಂಡು ನಾಗಮಲೆಗೆ ಕರೆತಂದಿದ್ದ. ಮಂಗಳವಾರ ರಮೇಶ್ ಬೇರೆ ಊರಿಗೆ ಹೋಗಿದ್ದ ವೇಳೆ ಬಂದ ಪ್ರಿಯಕರ ಮುನಿರಾಜು ಲಕ್ಷ್ಮಿಯನ್ನು ಕೊಂದು ತಾನೂ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಕ್ಷ್ಮಿಯನ್ನು ಕೊಲೆ ಮಾಡಿ ಫೇಸ್‌ಬುಕ್ ಲೈವ್ ಮಾಡಿರುವ ಪ್ರಿಯಕರ, ‘ನನ್ನನ್ನು ಕೊಲೆಗಾರನನ್ನಾಗಿಸಿದೆಯಲ್ಲಾ ಲಕ್ಷ್ಮಿ, ನಾನೇ ನಿನ್ನನ್ನು ಕೊಲೆ ಮಾಡಿದೆನಲ್ಲಾ, ನಿನ್ನ ರಕ್ತವನ್ನು ಕಾಣಲು ನನ್ನಲ್ಲಾಗುತ್ತಿಲ್ಲ’ ಎಂದು ಅಳುತ್ತಾ ವಿಡಿಯೋ ಮಾಡಿದ್ದಾನೆ. ಮೇಲ್ನೋಟಕ್ಕೆ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಶೀಘ್ರದಲ್ಲೇ 3,604 ಹೊಸ ಬಸ್ಗಳ ಖರೀದಿ : ಸಚಿವ ವಿ. ಸುನೀಲ್ಕುಮಾರ್
Next Article ತಮಿಳುನಾಡು : 3500 ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್