ಜಿಲ್ಲೆಗಳು

ಮಹಿಳೆಯ ಕೊಲೆ ಮಾಡಿ ತಾನೂ ಸಾವಿಗೆ ಶರಣು

ಹನೂರು : ಮಹಿಳೆಯೊಬ್ಬರನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ದುರುಳ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲ್ಲೂಕಿನ ನಾಗಮಲೆ ಗ್ರಾಮದ ಲಕ್ಷ್ಮಿ ( 35) ಕೊಲೆಯಾದವರು. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಮೂಲತಃ ತಮಿಳುನಾಡಿನ ಪೆನ್ನಾಗರಂ ನಿವಾಸಿ ಲಕ್ಷ್ಮಿಯನ್ನು ಕಳೆದ 7 ತಿಂಗಳ ಹಿಂದೆ ನಾಗಮಲೆ ಗ್ರಾಮದ ರಮೇಶ್ ಎಂಬಾತ ಕೂಡಾವಳಿ ವಿವಾಹ ಮಾಡಿಕೊಂಡು ನಾಗಮಲೆಗೆ ಕರೆತಂದಿದ್ದ. ಮಂಗಳವಾರ ರಮೇಶ್ ಬೇರೆ ಊರಿಗೆ ಹೋಗಿದ್ದ ವೇಳೆ ಬಂದ ಪ್ರಿಯಕರ ಮುನಿರಾಜು ಲಕ್ಷ್ಮಿಯನ್ನು ಕೊಂದು ತಾನೂ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಕ್ಷ್ಮಿಯನ್ನು ಕೊಲೆ ಮಾಡಿ ಫೇಸ್‌ಬುಕ್ ಲೈವ್ ಮಾಡಿರುವ ಪ್ರಿಯಕರ, ‘ನನ್ನನ್ನು ಕೊಲೆಗಾರನನ್ನಾಗಿಸಿದೆಯಲ್ಲಾ ಲಕ್ಷ್ಮಿ, ನಾನೇ ನಿನ್ನನ್ನು ಕೊಲೆ ಮಾಡಿದೆನಲ್ಲಾ, ನಿನ್ನ ರಕ್ತವನ್ನು ಕಾಣಲು ನನ್ನಲ್ಲಾಗುತ್ತಿಲ್ಲ’ ಎಂದು ಅಳುತ್ತಾ ವಿಡಿಯೋ ಮಾಡಿದ್ದಾನೆ. ಮೇಲ್ನೋಟಕ್ಕೆ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

12 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

13 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

15 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

17 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

17 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

17 hours ago