Mysore
20
overcast clouds
Light
Dark

ಭ್ರೂಣ ಹತ್ಯೆ ಪ್ರಕರಣ: ಮತ್ತೆರಡು ಸ್ಕ್ಯಾನಿಂಗ್‌ ಸೆಂಟರ್‌ ಸೀಜ್‌ ಮಾಡಿದ ಆರೋಗ್ಯ ಅಧಿಕಾರಿಗಳು

ಕಳೆದ ಎರಡು ವಾರಗಳ ಹಿಂದೆ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ವಿವಿಧ ನಗರಗಳಲ್ಲಿನ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಸರಿಯಾದ ದಾಖಲೆ ಇಲ್ಲದ ಸ್ಕ್ಯಾನಿಂಗ್‌ ಸೆಂಟರ್‌ಗಳಿಗೆ ನೋಟಿಸ್‌ ನೀಡಿ ಬಂದ್‌ ಮಾಡಲಾಗುತ್ತಿದೆ.

ಇದೀಗ ಮಂಡ್ಯ ಜಿಲ್ಲೆಯ ನಾಗಮಂಗಲದ ಎರಡು ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ಅಕ್ರಮ ಕಂಡುಬಂದಿದ್ದು ಆರೋಗ್ಯ ಅಧಿಕಾರಿಗಳು ಆ ಎರಡೂ ಸ್ಕ್ಯಾನಿಂಗ್‌ ಸೆಂಟರ್‌ಗಳನ್ನೂ ಸೀಜ್ ಮಾಡಿದ್ದಾರೆ. ಹೌದು, ನಾಗಮಂಗಲದ ಕಾವೇರಿ ಹಾಗೂ ಲಕ್ಷ್ಮಿ ಡಯಾಗ್ನೋಸ್ಟಿಕ್‌ ಸೆಂಟರ್‌ಗಳಿಗೆ ಆರೋಗ್ಯ ಅಧಿಕಾರಿಗಳು ಪರಿಶೀಲನೆಗೆಂದು ತೆರಳಿದ್ದು ಈ ಎರಡೂ ಸೆಂಟರ್‌ಗಳಲ್ಲಿ ಸಿಬ್ಬಂದಿ ಡೇಟಾವನ್ನೇ ಅಳಿಸಿಹಾಕಿರುವುದು ಬೆಳಕಿಗೆ ಬಂದಿದೆ.

ಲಕ್ಷ್ಮಿ ಡಯಾಗ್ನೋಸ್ಟಿಕ್‌ ಸೆಂಟರ್‌ನಲ್ಲಿ 2 ವರ್ಷದ ದಾಖಲೆಗಳನ್ನು ನಾಶ ಮಾಡಲಾಗಿದ್ದು, ಕಾವೇರಿ ಡಯಾಗ್ನೋಸ್ಟಿಕ್‌ ಸೆಂಟರ್‌ನಲ್ಲಿ 3 ತಿಂಗಳ ಮಾಹಿತಿಯನ್ನು ಡಿಲೀಟ್‌ ಮಾಡಲಾಗಿದೆ. ನಾಗಮಂಗಲ ಸರ್ಕಾರಿ ಆಸ್ಪತ್ರೆಯ ಸಮೀಪವೇ ಈ ಸ್ಕ್ಯಾನಿಂಗ್‌ ಸೆಂಟರ್‌ಗಳಿವೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ