ಕಳೆದ ಎರಡು ವಾರಗಳ ಹಿಂದೆ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ವಿವಿಧ ನಗರಗಳಲ್ಲಿನ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಸರಿಯಾದ ದಾಖಲೆ ಇಲ್ಲದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ನೋಟಿಸ್ ನೀಡಿ ಬಂದ್ ಮಾಡಲಾಗುತ್ತಿದೆ.
ಇದೀಗ ಮಂಡ್ಯ ಜಿಲ್ಲೆಯ ನಾಗಮಂಗಲದ ಎರಡು ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಅಕ್ರಮ ಕಂಡುಬಂದಿದ್ದು ಆರೋಗ್ಯ ಅಧಿಕಾರಿಗಳು ಆ ಎರಡೂ ಸ್ಕ್ಯಾನಿಂಗ್ ಸೆಂಟರ್‌ಗಳನ್ನೂ ಸೀಜ್ ಮಾಡಿದ್ದಾರೆ. ಹೌದು, ನಾಗಮಂಗಲದ ಕಾವೇರಿ ಹಾಗೂ ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಆರೋಗ್ಯ ಅಧಿಕಾರಿಗಳು ಪರಿಶೀಲನೆಗೆಂದು ತೆರಳಿದ್ದು ಈ ಎರಡೂ ಸೆಂಟರ್‌ಗಳಲ್ಲಿ ಸಿಬ್ಬಂದಿ ಡೇಟಾವನ್ನೇ ಅಳಿಸಿಹಾಕಿರುವುದು ಬೆಳಕಿಗೆ ಬಂದಿದೆ.
ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ 2 ವರ್ಷದ ದಾಖಲೆಗಳನ್ನು ನಾಶ ಮಾಡಲಾಗಿದ್ದು, ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ 3 ತಿಂಗಳ ಮಾಹಿತಿಯನ್ನು ಡಿಲೀಟ್ ಮಾಡಲಾಗಿದೆ. ನಾಗಮಂಗಲ ಸರ್ಕಾರಿ ಆಸ್ಪತ್ರೆಯ ಸಮೀಪವೇ ಈ ಸ್ಕ್ಯಾನಿಂಗ್ ಸೆಂಟರ್‌ಗಳಿವೆ.
ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…
ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…
ನವದೆಹಲಿ : ಹ್ಯಾಜಲ್‌ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…