ಜಿಲ್ಲೆಗಳು

ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ಯಶಸ್ವಿ ಹೃದಯ ಕಸಿ

ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಚಿಕಿತ್ಸೆ

ಮೈಸೂರು: ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ಹೃದಯ ಕಸಿ ನೆರವೇರಿಸಲಾಗಿದ್ದು, ಎಲ್ಲರಂತೆ ಸಹಜವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆುಂಲ್ಲಿ ತೆರೆಯಲಾದ ಹೃದಯ ವೈಫಲ್ಯದ ಕ್ಲಿನಿಕ್ ಸಹಾಯದಿಂದ ಕೊನೆಯ ಹಂತದ ಹೃದ್ರೋಗದಿಂದ ಬಳಲುತ್ತಿರುವ ನಾಲ್ಕು ರೋಗಿಗಳನ್ನು ಉಳಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ರವಿ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಎಂಬವರಿಗೆ ಹೃದ್ರೋಗ ಸಮಸ್ಯೆ ಎದುರಾಗಿತ್ತು. ಅವರು ಕೊನೆಯ ಹಂತದ ಹೃದಯ ವೈಫಲ್ಯದಿಂದ ಬಳಲುತ್ತಿದ್ದರು. ಇವರಿಗೆ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹೃದಯ ವೈಫಲ್ಯ ಕ್ಲಿನಿಕ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು ಮತ್ತು ಅವರಿಗೆ ಹೃದಯ ಕಸಿ ಚಿಕಿತ್ಸೆ ಪಡೆಯಲು ಸಲಹೆ ನೀಡಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಎಂ.ಎಸ್.ರಾಮಯ್ಯ-ನಾರಾಯಣ ಹಾರ್ಟ್ ಸೆಂಟರ್‌ನಲ್ಲಿ ಕಸಿ ನಡೆಸಲಾಯಿತು ಎಂದು ಅವರು ತಿಳಿಸಿದರು.
ನಾರಾಉಣ ಹೆಲ್ತ್‌ನ ಹೆಸರಾಂತ ಹೃದಯ ಕಸಿ ತಜ್ಞ ಡಾ.ಯು.ಎಂ.ನಾಗಮಲ್ಲೇಶ್ ನೇತೃತ್ವದ ವೈದ್ಯಕೀಯ ತಜ್ಞರ ತಂಡದಿಂದ ಯಶಸ್ವಿ ಹೃದಉ ಕಸಿ ನಡೆಸಲಾಗಿದ್ದು, ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾರೆ ಎಂದು ಅವರು ವಿವರಿಸಿದರು.
ಹೃದಯ ಕಸಿ ತಜ್ಞ ಡಾ. ನಾಗಮಲ್ಲೇಶ್ ಮಾತನಾಡಿ, ಕರ್ನಾಟಕದಲ್ಲಿ ಸುಮಾರು ೧೫೦ರಿಂದ ೨೦೦ ಮಂದಿಗೆ ಹೃದಯ ಕಸಿ ಮಾಡಲಾಗುತ್ತಿದೆ. ಯೂರೋಪ್‌ನಲ್ಲಿ ಬ್ರೈನ್ ಡೆಡ್ ಆದವರಿಗೆ ಅಂಗಾಂಗ ದಾನ ಕಡ್ಡಾಯಗೊಳಿಸಲಾಗಿದೆ. ಆದರೆ, ಭಾರತದಲ್ಲಿ ಸ್ವಯಂಪ್ರೇರಿತರಾಗಿ ಅಂಗಾಂಗ ದಾನ ಮಾಡಬೇಕು ಎಂದರು.
ನಾರಾಉಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಕೇಶವಮೂರ್ತಿ ಮಾತನಾಡಿ, ಅನೇಕರಿಗೆ ಹೃದಯ ವೈಫಲ್ಯದ ಕುರಿತಾಗಲಿ ಅಥವಾ ಅಂಗಾಂಗ ದಾನದ ಬಗ್ಗೆ ಅರಿವು ಕಡಿಮೆ ಇದೆ. ಹೃದಯ ವೈಫಲ್ಯಕ್ಕೆ ಒಳಗಾದವರಿಗೆ ಸ್ವತಃ ಯಾವುದೇ ಕೆಲಸ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಸುಸ್ತು, ಎದೆನೋವು, ತಲೆಸುತ್ತು, ಆಯಾಸ ಕಾಣಿಸಿಕೊಳ್ಳುತ್ತದೆ ಎಂದರು.
ಹೃದಯ ವೈಫಲ್ಯ ಎಂಬುದು ಕೊನೆಯ ಹಂತವಾಗಿದ್ದು, ಈ ಅವಸ್ಥೆಯಲ್ಲಿ 6 ತಿಂಗಳಿಂದ ಒಂದು ವರ್ಷದ ಅವಧಿಯವರೆಗೆ ಬದುಕಬಹುದಷ್ಟೆ. ಇಂತಹ ರೋಗಿಗಳಿಗೆ ನಾವು ಹೃದಯ ಕಸಿ ಮಾಡುತ್ತೇವೆ ಎಂದು ಹೇಳಿದರು.
ಶಸ್ತ್ರಚಿಕಿತ್ಸೆಗೆ ಒಳಗಾದ ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

3 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

3 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

4 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

4 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

5 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

5 hours ago