ನಂಜನಗೂಡು: ತಾಲ್ಲೂಕಿನ ಹೆಡಿಯಾಲದ ಅಂಗನವಾಡಿಗೆ ಹುಳು ಹಿಡಿದ ಆಹಾರಗಳು ಮತ್ತೆ ಸರಬರಾಜಾಗುತ್ತಿರುವ ಆತಂಕಕಾರಿ ಘಟನೆ ನಡೆದಿದೆ.
ಅಂಗನವಾಡಿಗೆ ಪೂರೈಕೆಯಾಗುತ್ತಿರುವ ಆಹಾರ ಪುಟ್ಟಗಳಲ್ಲಿರುವ ಪದಾರ್ಥಗಳು ಹುಳು ಹಿಡಿದಿರುವುದು ಕಂಡುಬಂದಿದೆ. ಕಳೆದ ವರ್ಷವೂ ಇದೇ ರೀತಿ ಹುಳುಹಿಡಿದ ಆಹಾರ ಪದಾರ್ಥಗಳು ಸರಬರಾಜಾಗಿದ್ದ
ಹಿನ್ನಲೆಯಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದ್ದ ಎಂಎಸ್‌ಪಿಸಿ ಏಜೆನ್ಸಿಯನ್ನು ರದ್ದು ಮಾಡಿ
ಬೇರೆ ಕಡೆಯಿಂದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲಾಗುತ್ತಿತ್ತು.
ಇಂತಹ ಹುಳು ಹಿಡಿದ ಅಹಾರ ಪದಾರ್ಥಗಳನ್ನು ಅಂಗನವಾಡಿಯ ಮಕ್ಕಳಿಗೆ ಪೂರೈಕೆ ಮಾಡುತ್ತಿದ್ದ ಈ ಸಂಸ್ಥೆಯ ವಿರುದ್ಧ ಕೇಂದ್ರ ಅಹಾರ ಸಂಶೋಧನಾಯದ ಅಧಿಕಾರಿಗಳು ದಾಳಿ ನಡೆಸಿ, ನೀಡಿದ ವರದಿಯ ಮೇಲೆ ಈ ಸಂಸ್ಥೆಯ ಆಹಾರ ಪೂರೈಕೆಯ ಪರವಾನಗಿಯನ್ನು ಆಗ ರದ್ದು ಮಾಡಲಾಗಿತ್ತು
ಆದರೆ, ಈ ವರದಿಗೆ ಮೂರೇ ತಿಂಗಳಲ್ಲಿ ಧೂಳು ಹಿಡಿಸಿ ತಾಲ್ಲೂಕಿನ ಅಂಗನವಾಡಿಗಳಿಗೆ ಅಹಾರ ಪೂರೈಸುವ ಪರವಾನಗಿಯನ್ನು ಎಂಎಸ್‌ಪಿಸಿ ಪಡೆಯಲು ಯಶಸ್ವಿಯಾಗಿತ್ತು.
ಈಗ ಮತ್ತೆ ತಾಲೂಕಿನ ಅಂಗನವಾಡಿಗಳಿಗೆ ಹುಳು ಹಿಡಿದ ಅಹಾರ ಪದಾರ್ಥಗಳು ಸರಬರಾಜಾಗುತ್ತಿರುವುದು ಬಹಿರಂಗವಾಗಿದ್ದು, ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟವರ ವಿರುದ್ಧ ಈಗಲಾದರೂ ಕ್ರಮ ಜರುಗಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…