ಜಿಲ್ಲೆಗಳು

ಹೆಗ್ಗೋಠಾರ: ದಲಿತ ಮಹಿಳೆಗೆ ಅವಮಾನಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಭಾನುವಾರ ದಲಿತ ಕೇರಿಯ ಜನರೆಲ್ಲರೂ ಒಟ್ಟು ಸೇರಿ ಗ್ರಾಮದ ಎಲ್ಲ 42 ತೊಂಬೆ ( ಮಿನಿ‌ ಟ್ಯಾಂಕ್‌) ಗಳ ಬಳಿ ಹೋಗಿ ನೀರು ಕುಡಿದರು. ಅವರಿಗೆ ಇಷ್ಟೊಂದು ಕಡೆಗಳಲ್ಲಿ ನೀರು ಕುಡಿಯುವ ದಾಹವೇನೂ ಇರಲಿಲ್ಲ. ಆದರೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾದ ಬಳಿಕವೂ ಅಸ್ಪೃಶ್ಯತೆ ಆಚರಿಸುವ ಮನಸ್ಸುಗಳ ವಿರುದ್ಧ ಸೆಣಸುವ ದಾಹವಿತ್ತು.  

ಶುಕ್ರವಾರ ದಲಿತ ಮಹಿಳೆಯೊಬ್ಬರು ಗ್ರಾಮದ ಮಿನಿ ಟ್ಯಾಂಕ್‌ ನಲ್ಲಿಯಿಂದ ನೀರು ಕುಡಿದರು ಎಂಬ ಕಾರಣಕ್ಕೆ ಮೇಲ್ಜಾತಿಯ ವ್ಯಕ್ತಿಯೊಬ್ಬರು ಟ್ಯಾಂಕ್‌ನ ಎಲ್ಲ ನೀರು ಖಾಲಿ ಮಾಡಿಸಿ, ಗೋ ಮೂತ್ರ ಸಿಂಪಡಿಸಿ ಶುದ್ದೀಕರಿಸಿದ ಘಟನೆಗೆ ಪ್ರತಿಕ್ರಿಯೆಯಾಗಿ ಗ್ರಾಮಕ್ಕೆ ತೆರಳಿದ ಅಧಿಕಾರಿಗಳು ದಲಿತ ಮುಖಂಡರನ್ನು ಗ್ರಾಮದ ಎಲ್ಲ 42 ತೊಂಬೆಗಳ ಬಳಿ ಕರೆದೊಯ್ದು ನೀರು ಕುಡಿಸಿದರು. ಗ್ರಾಮದಲ್ಲಿರುವ ಕುಡಿಯುವ ನೀರಿನ ತೊಂಬೆಗಳು ಎಲ್ಲ ಸಮುದಾಯಗಳಿಗೂ ಸೇರಿದ್ದಾಗಿದೆ ಎಂದು ಸಂದೇಶ ಸಾರಿದರು.

ತಹಸೀಲ್ದಾರ್ ಬಸವರಾಜು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ, ಪಿಡಿಒ ಮಾದಪ್ಪ, ಗ್ರಾಮಾಂತರ ಠಾಣೆಯ ಸಬ್ ಇನ್‌ ಸ್ಪೆಕ್ಟರ್‌ ಜಯರಾಂ, ಹಾಸ್ಟೆಲ್ ವಾರ್ಡನ್ ರಾಜು ಹಾಗೂ ಇತರರ ಸಮ್ಮುಖದಲ್ಲಿ ದಲಿತ ಮುಖಂಡರು, ಯುವಕರು ಗ್ರಾಮದ ಎಲ್ಲ ಬೀದಿಗಳ ತೊಂಬೆಗಳನ್ನು ನಲ್ಲಿಯ ನೀರು ಕುಡಿದರು.

ಗ್ರಾಮದಲ್ಲಿರುವ ಕುಡಿಯುವ ನೀರಿನ ತೊಂಬೆಗಳು ಎಲ್ಲ ಸಮುದಾಯಗಳಿಗೂ ಸೇರಿದ್ದಾಗಿದೆ. ಯಾವುದೇ ಸಮುದಾಯಕ್ಕೆ ಸೀಮಿತವಲ್ಲ ಎಂಬುದರ ಕುರಿತು ಜಾಗೃತಿ ಮೂಡಿಸಿದರು. ಸ್ಥಳೀಯ ಗ್ರಾಮ ಪಂಚಾಯಿತಿಯಿಂದ “”ಇದು ಸಾರ್ವಜನಿಕರ ಕುಡಿಯುವ ನೀರಿನ ತೊಂಬೆಯಾಗಿದೆ. ಎಲ್ಲ ವರ್ಗದ ಸಾರ್ವಜನಿಕರು ಬಳಸಲು ಮುಕ್ತವಾಗಿದೆ ನೀರನ್ನು ಮಿತವಾಗಿ ಬಳಸಿʼʼ ಎಂದು ಎಲ್ಲ ಮಿನಿ ಟ್ಯಾಂಕ್‌ ಗಳ ಮೇಲೆ ಬರೆಸಲಾಯಿತು. ಇದಕ್ಕೂ ಮುನ್ನ ಉಪ ವಿಭಾಗಾಧಿಕಾರಿ ಗೀತಾ ಹುಡೇದ ಅವರು ಗ್ರಾಮಕ್ಕೆ ಆಗಮಿಸಿ ವಿವಾದಕ್ಕೆ ಕಾರಣವಾದ ತೊಂಬೆಯನ್ನು ಪರಿಶೀಲಿಸಿದರು.

ದೂರು ದಾಖಲು

ಇದೇ ವೇಳೆ ದಲಿತ ಮಹಿಳೆಯನ್ನು ಅವಮಾನಿಸಿದ ಘಟನೆ ಸಂಬಂಧ ಗ್ರಾಮದ ವ್ಯಕ್ತಿಯೊಬ್ಬರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟರ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಾಗಿದೆ. ಗ್ರಾಮದ ಗಿರಿಯಪ್ಪ ಅವರು ಮಹದೇವಪ್ಪ ಎಂಬುವರ ವಿರುದ್ದ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಗ್ರಾಮದಲ್ಲಿ ಶುಕ್ರವಾರ ನಡೆದ ಮದುವೆಗೆ ಬಂದಿದ್ದ ಸರಗೂರು ತಾಲ್ಲೂಕಿನಿಂದ ಬಂದಿದ್ದ ಮಹಿಳೆ ಶಿವಮ್ಮ ಗ್ರಾಮದ ಕೃಷ್ಣದೇವರಾಯ ದೇವಾಲಯ ಬಳಿಯ ತೊಂಬೆಯಿಂದ ನೀರು ಕುಡಿದಿದ್ದರು. ಇದನ್ನು ಗಮನಿಸಿದ ಮಹದೇವಪ್ಪ ಎಂಬವರು ಆಕೆಯನ್ನು ನಿಂದಿಸಿದ್ದಾರೆ ಎನ್ನಲಾಗಿದೆ. ತೊಂಬೆಯ ನೀರನ್ನೆಲ್ಲ ಖಾಲಿ ಮಾಡಿಸಿ ಗೋ ಮೂತ್ರದಿಂದ ಶುದ್ದಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದಾರೆಂದು ಗ್ರಾಮದ ಯುವಕರು ಮೊಬೈಲ್ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ಮಹದೇವಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ. ಸಂತ್ರಸ್ತ ಮಹಿಳೆ ಶಿವಮ್ಮ ಸೋಮವಾರ ಪೊಲೀಸ್ ಠಾಣೆಗೆ ತೆರಳಿ ಹೇಳಿಕೆ ನೀಡಲಿದ್ದಾರೆ. 

ಮುಖಂಡರ ಸಭೆ

ಭಾನುವಾರ ಬೆಳಗ್ಗೆ ಗ್ರಾಮಕ್ಕೆ ತೆರಳಿದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ, ತಹಸೀಲ್ಧಾರ್ ಅವರ ಸಮ್ಮುಖದಲ್ಲಿ ದಲಿತರ ಬೀದಿಯಲ್ಲಿ ಮುಖಂಡರ ಸಭೆಯಯನ್ನು ನಡೆಸಲಾಯಿತು. ಗ್ರಾಮಸ್ಥರಿಂದ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿದರು. 

ಸಭೆಗೆ ಸವರ್ಣೀಯ ಮುಖಂಡರನ್ನು ಆಹ್ವಾನಿಸಲಾಯಿತು. ಆದರೆ, ಯಾರೊಬ್ಬರೂ ಪಾಲ್ಗೊಳ್ಳಲಿಲ್ಲ. ಈ ಘಟನೆಗೆ ಕಾರಣರಾದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಅವರು ಆಗ್ರಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಮುಖಂಡರು ಯಾವುದೇ ಪ್ರಚೋದನೆಗೆ ಒಳಗಾಗಬಾರದು. ಗ್ರಾಮದಲ್ಲಿ ಶಾಂತಿ ಕಾಪಾಡಿಕೊಂಡು ಹೋಗಬೇಕು ಅಧಿಕಾರಿಗಳು ಎಚ್ಚರಿಸಿದರು.

ಸಭೆಯಲ್ಲಿ ಮುಖಂಡರಾದ ದುಂಡುಮಾದಯ್ಯ, ಕುಮಾರ್, ಗ್ರಾಪಂ ಸದಸ್ಯ ನಾಗೇಶ್, ದಿಲೀಪ್ ಇತರರು ಪಾಲ್ಗೊಂಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್‌ ಬಂದೋ ಬಸ್ತ್ ಮಾಡಲಾಗಿದೆ.

andolana

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

3 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

9 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

10 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

10 hours ago