ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ
ಮೈಸೂರು: ನಗರದ ಜೆಎಸ್‌ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ.
ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್ ರಸ್ತೆಯಲ್ಲಿ ಭಾನುವಾರ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಇದೀಗ ಮತ್ತೆ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಆರ್‌ಎಫ್‌ಓ ಸುರೇಂದ್ರ, ಡಿ ಆರ್‌ಎಫ್‌ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಇವರಿಗೆ ಸ್ಥಳೀಯರಾದ ಮಧುಕರ್ ಮತ್ತುಸ್ನೇಹಿತರು ನೆರವು ನೀಡುತ್ತಿದ್ದಾರೆ.
ಭಾನುವಾರ ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿ ಅವಿತುಕೊಂಡಿತ್ತು. ಮೋಟಾರ್ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ನೀರನ್ನು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.
ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿದೆ. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿರುವುದರಿಂದ ಮೊಸಳೆಯ ಪಾಲಿಗೆ ಇದು ಸುರಕ್ಷಿತ ತಾಣವಾಗಿದೆ. ಈ ಕಾರಣದಿಂದ ಈಗ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಎಲೆತೋಟ, ಸೀವೇಜ್ ಫಾರಂ ಸಮೀಪ ಕಳೆದ ಮೂರು ವರ್ಷಗಳಿಂದ ಕಾಣಿಸಿಕೊಳ್ಳುತ್ತಿರುವ ಮೊಸಳೆ ಇದೀಗ ನಾಗರಿಕರು ವಾಸ ಮಾಡುವ ಮನೆ ಸಮೀಪಕ್ಕೆ ಬಂದಿರುವುದರಿಂದ ಹೇಗಾದರೂ ಮಾಡಿ ಸೆರೆ ಹಿಡಿಯಲೇಬೇಕೆಂದು ಅರಣ್ಯ ಇಲಾಖೆ ಪಣ ತೊಟ್ಟಿದೆ. ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಕಾರ್ಯಾಚರಣೆ ಬಳಿಕ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಪತ್ತೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.
ಸೈಂಟ್ ಮೇರಿಸ್ ಶಾಲೆ ಸಮೀಪದ ರಾಜಕಾಲುವೆಯಲ್ಲಿ ಅಕ್ಟೋಬರ್ 15ರಂದು ಕಾಣಿಸಿಕೊಂಡ ಮೊಸಳೆ ಬಳಿಕ ಎಲೆತೋಟದ ತೆರೆದ ಕಾಲುವೆಯಲ್ಲಿಯೇ ಪದೇ ಪದೇ ಕಾಣಿಸಿಕೊಂಡಿದೆ. –
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…