ಜಿಲ್ಲೆಗಳು

ಎಲೆತೋಟದ ಮೊಸಳೆ ಸೆರೆಗೆ ಜೆಸಿಬಿ ಕಾರ್ಯಾಚರಣೆ

ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

ಮೈಸೂರು: ನಗರದ ಜೆಎಸ್‌ಎಸ್‌ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ.

ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್‌ ರಸ್ತೆಯಲ್ಲಿ ಭಾನುವಾರ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಇದೀಗ ಮತ್ತೆ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಆರ್‌ಎಫ್‌ಓ ಸುರೇಂದ್ರ, ಡಿ ಆರ್‌ಎಫ್‌ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಇವರಿಗೆ ಸ್ಥಳೀಯರಾದ ಮಧುಕರ್‌ ಮತ್ತುಸ್ನೇಹಿತರು ನೆರವು ನೀಡುತ್ತಿದ್ದಾರೆ.

ಭಾನುವಾರ ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿ ಅವಿತುಕೊಂಡಿತ್ತು. ಮೋಟಾರ್‌ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ನೀರನ್ನು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.

ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿದೆ. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿರುವುದರಿಂದ ಮೊಸಳೆಯ ಪಾಲಿಗೆ ಇದು ಸುರಕ್ಷಿತ ತಾಣವಾಗಿದೆ. ಈ ಕಾರಣದಿಂದ ಈಗ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಎಲೆತೋಟ, ಸೀವೇಜ್‌ ಫಾರಂ ಸಮೀಪ ಕಳೆದ ಮೂರು ವರ್ಷಗಳಿಂದ ಕಾಣಿಸಿಕೊಳ್ಳುತ್ತಿರುವ ಮೊಸಳೆ ಇದೀಗ ನಾಗರಿಕರು ವಾಸ ಮಾಡುವ ಮನೆ ಸಮೀಪಕ್ಕೆ ಬಂದಿರುವುದರಿಂದ ಹೇಗಾದರೂ ಮಾಡಿ ಸೆರೆ ಹಿಡಿಯಲೇಬೇಕೆಂದು ಅರಣ್ಯ ಇಲಾಖೆ ಪಣ ತೊಟ್ಟಿದೆ. ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಕಾರ್ಯಾಚರಣೆ ಬಳಿಕ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಪತ್ತೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.

ಸೈಂಟ್‌ ಮೇರಿಸ್‌ ಶಾಲೆ ಸಮೀಪದ ರಾಜಕಾಲುವೆಯಲ್ಲಿ ಅಕ್ಟೋಬರ್‌ 15ರಂದು ಕಾಣಿಸಿಕೊಂಡ ಮೊಸಳೆ ಬಳಿಕ ಎಲೆತೋಟದ ತೆರೆದ ಕಾಲುವೆಯಲ್ಲಿಯೇ ಪದೇ ಪದೇ ಕಾಣಿಸಿಕೊಂಡಿದೆ. –

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

13 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

13 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

15 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

17 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

20 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

21 hours ago