ಮೈಸೂರು : ನಗರದ ಇಟ್ಟಿಗೆಗೂಡಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿಂದು helping hands jain organizations ಸದಸ್ಯರುಗಳು ಇಂದು ಶಾಲೆಯ ವಿದ್ಯಾರ್ಥಿಗಳಿಗೆ ಬಿಳಿಸಮವಸ್ತ್ರ, ನೋಡ್ ಬುಕ್, ಶೂ, ಪ್ಯಾಡ್ ಸೇರಿದಂತೆ ಹಲವು ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್ ಅವರು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಸರ್ಕಾರಿ ಶಾಲೆಗಳ ಬಲವರ್ಧನೆ ಗೆ ಸರ್ಕಾರ ಹಲವು ರೀತಿಯ ಕ್ರಮ ವಹಿಸಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೂ ಶಾಲೆಗಳ ಉನ್ನತಿಗೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ ಎಂದರು. ಮುಂದುವರಿದು ಸಂಘ-ಸಂಸ್ಥಗಳು ನೀಡುತ್ತಿರುವ ನೆರವಿನಿಂದಾಗಿ ರಾಜ್ಯದ ಹಲವೆಡೆ ಸರ್ಕಾರಿ ಶಾಲೆಗಳು ಉಳಿದು ಕೊಂಡಿವೆ. ಇಂತಹ ಕಾರ್ಯ ನಿರಂತರವಾಗಿ ಇರಬೇಕು ಎಂದು ಆಶಿಸಿದರು.
ಬಳಿಕ ಮಾತನಾಡಿದ ದಕ್ಷಿಣ ವಲಯ ಬಿಇಒ ರಾಮಾರಾಧ್ಯ ಅವರು ಇಟ್ಟಿಗೆಗೂಡು ಸರ್ಕಾರಿ ಶಾಲೆ ಮಾದರಿಯಾಗಿದೆ. ಖಾಸಗಿ ಶಾಲೆಗಳಲ್ಲಿ ಸಿಗುತ್ತಿರುವ ಸೌಲಭ್ಯ ಈ ಶಾಲೆಯಲ್ಲೂ ದೊರಕುತ್ತಿದೆ. ಗುಣಮಟ್ಟ ಶಿಕ್ಷಣಕ್ಕೆ ಇಲ್ಲಿ ಒತ್ತು ನೀಡಲಾಗುತ್ತಿದ್ದು, ಒಳ್ಳೆಯ ಬೆಳವಣಿಗೆ ಎಂದರು. ಮುಖ್ಯ ಶಿಕ್ಷಕ ಮಾಲಂಗಿ ಸುರೇಶ್ ಮಾತನಾಡಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಡಿಡಿಪಿಐ ಆದ್ಯತೆ ನೀಡುತ್ತಿದ್ದು, ಶಾಲೆ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಪ್ರತಿ ವರ್ಷ ಮಕ್ಕಳಿಗೆ ಅಗತ್ಯವಿರುವ ಕಲಿಕಾ ಸಾಮಗ್ರಿ ಮತ್ತು ಪರಿಕರಗಳನ್ನು ಹೆಲ್ಪಿಂಗ್ಸ್ ಹ್ಯಾಂಡ್ಸ್ ಸಂಸ್ಥೆ ನೀಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಆರ್ಗನೈಸೇಷನ್ ಪದಾಧಿಕಾರಿಗಳಾದ ರಾಜನ್ ಬಾಗ್ಮಾರ್, ಮಹಾವೀರ್ ಕಬಿಯಾ, ಆನಂದ್ ಪಟ್ವಾರ್ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸೋಮೇಗೌಡ, ಡಯೆಟ್ ಉಪನ್ಯಾಸಕಿ ಜಯಂತಿ, ಗ್ರಾಮ ಲೆಕ್ಕಿಗರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…