ಕನ್ನಡ ಜಾನಪದ ಪರಿಷತ್ ವತಿಯಿಂದ ಮೈಸೂರಿನ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಿ.ಮಾದೇಗೌಡ, ಪ್ರೊ.ಎಂ.ಕೃಷ್ಣೇಗೌಡ ಅವರನ್ನು ಸನ್ಮಾನಿಸಲಾಯಿತು.
ಮೈಸೂರು: ನಮ್ಮಲ್ಲಿ ಪ್ರಾಥಮಿಕ ಶಿಕ್ಷಣ ಚೆನ್ನಾಗಿದೆ. ಆದರೆ, ಉನ್ನತ ಶಿಕ್ಷಣ ಭದ್ರವಾಗಿಲ್ಲ. ಬೇರೆ ಬೇರೆ ದೇಶಗಳ ವಿಶ್ವವಿದ್ಯಾನಿಲಯಗಳನ್ನು ಕಾಪಿ ಮಾಡಲು ಹೋಗಿ ಈ ರೀತಿಯಾಗಿದೆ ಎಂದು ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ತಿಳಿಸಿದರು.
ಕನ್ನಡ ಜಾನಪದ ಪರಿಷತ್ ಶುಕ್ರವಾರ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂಗ್ಲಿಷ್ ಕಲಿತವರು ಶ್ರೇಷ್ಠ ಎಂಬ ಭಾವನೆ ಸರಿಯಲ್ಲ. ಕನ್ನಡವನ್ನು ನಾವು ಹೇಳಿದಂತೆ ಬರೆಯುತ್ತೇವೆ. ಕನ್ನಡ ಅತ್ಯಂತ ಶ್ರೀಮಂತ ಭಾಷೆ. ಹಾಗಾಗಿ, ರಚನಾತ್ಮಕವಾಗಿ ಇಂಗ್ಲಿಷ್‌ಗಿಂತ ಕನ್ನಡ ಭಾಷೆಯೇ ಉತ್ತಮವಾದುದು. ಇಂಗ್ಲಿಷ್ ಅನ್ನು ಫ್ರಾನ್ಸ್, ಜರ್ಮನಿಯವರು ಹತ್ತಿರ ಬಿಟ್ಟುಕೊಂಡಿಲ್ಲ. ಆದರೆ, ಭಾರತದಲ್ಲಿ ಯಾವ ಊಟ ಮಾಡಬೇಕು, ಯಾವ ಬಟ್ಟೆ ಧರಿಸಬೇಕು ಎಂಬುದನ್ನು ನಿರ್ಧರಿಸುವುದು ಅಮೆರಿಕ ಎಂದು ಜೀನ್ಸ್, ಡೋಮಿನೊಸ್, ಕೆಎಫ್‌ಸಿಯನ್ನು ನಿದರ್ಶನವಾಗಿ ನೀಡಿದರು.
ಚುನಾವಣೆ ಸಂದರ್ಭದಲ್ಲಿ ನಿಮ್ಮ ಸೇವೆ ಮಾಡಲು ಅವಕಾಶ ಕೊಡಿ ಎಂದು ಕೇಳುವ ರಾಜಕಾರಣಿಗಳು, ಗೆದ್ದ ನಂತರ ಅಧಿಕಾರದ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಇವತ್ತು ರಾಜಕಾರಣ ಗೌರವ ತರುವ ರೀತಿಯಲ್ಲಿ ಉಳಿದಿಲ್ಲ. ಅಧಿಕಾರ, ಹಣದಿಂದ ಬರುವ ಗೌರವ ಸರಿಯಲ್ಲ. ವ್ಯಕ್ತಿತ್ವದಿಂದ ಗೌರವ ಸಿಗುವಂತಿರಬೇಕು. ಈ ದಿಸೆಯಲ್ಲಿ ಸಿಐಟಿಬಿ ಅಧ್ಯಕ್ಷರಾಗಿ ಡಿ.ಮಾದೇಗೌಡರು ಮಾಡಿರುವ ಕಾರ್ಯ ಅನನ್ಯ ಮತ್ತು ಅದ್ಭುತ ಎಂದು ಶ್ಲಾಘಿಸಿದರು.
ಸನ್ಮಾನಿತರಾದ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಮಾತನಾಡಿ, ತಾವು ಸಿಐಟಿಬಿ ಅಧ್ಯಕ್ಷರಾಗಿದ್ದಾಗ ನಿರ್ಮಿಸಿದ್ದ ಕಟ್ಟಡದಲ್ಲಿ ಕುವೆಂಪುನಗರ ಪ್ರಥಮ ದರ್ಜೆ ಕಾಲೇಜು ನಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ರಾಗಿಣಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಕ್ಯಾತನಹಳ್ಳಿ ಎಚ್.ಪ್ರಕಾಶ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಹಾಜರಿದ್ದರು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…