ಜಿಲ್ಲೆಗಳು

ನಮ್ಮಲ್ಲಿ ಉನ್ನತ ಶಿಕ್ಷಣ ಭದ್ರವಾಗಿಲ್ಲ: ಪ್ರೊ.ಎಂ.ಕೃಷ್ಣೇಗೌಡ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ

ಮೈಸೂರು: ನಮ್ಮಲ್ಲಿ ಪ್ರಾಥಮಿಕ ಶಿಕ್ಷಣ ಚೆನ್ನಾಗಿದೆ. ಆದರೆ, ಉನ್ನತ ಶಿಕ್ಷಣ ಭದ್ರವಾಗಿಲ್ಲ. ಬೇರೆ ಬೇರೆ ದೇಶಗಳ ವಿಶ್ವವಿದ್ಯಾನಿಲಯಗಳನ್ನು ಕಾಪಿ ಮಾಡಲು ಹೋಗಿ ಈ ರೀತಿಯಾಗಿದೆ ಎಂದು ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ತಿಳಿಸಿದರು.

ಕನ್ನಡ ಜಾನಪದ ಪರಿಷತ್ ಶುಕ್ರವಾರ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂಗ್ಲಿಷ್ ಕಲಿತವರು ಶ್ರೇಷ್ಠ ಎಂಬ ಭಾವನೆ ಸರಿಯಲ್ಲ. ಕನ್ನಡವನ್ನು ನಾವು ಹೇಳಿದಂತೆ ಬರೆಯುತ್ತೇವೆ. ಕನ್ನಡ ಅತ್ಯಂತ ಶ್ರೀಮಂತ ಭಾಷೆ. ಹಾಗಾಗಿ, ರಚನಾತ್ಮಕವಾಗಿ ಇಂಗ್ಲಿಷ್‌ಗಿಂತ ಕನ್ನಡ ಭಾಷೆಯೇ ಉತ್ತಮವಾದುದು. ಇಂಗ್ಲಿಷ್ ಅನ್ನು ಫ್ರಾನ್ಸ್, ಜರ್ಮನಿಯವರು ಹತ್ತಿರ ಬಿಟ್ಟುಕೊಂಡಿಲ್ಲ. ಆದರೆ, ಭಾರತದಲ್ಲಿ ಯಾವ ಊಟ ಮಾಡಬೇಕು, ಯಾವ ಬಟ್ಟೆ ಧರಿಸಬೇಕು ಎಂಬುದನ್ನು ನಿರ್ಧರಿಸುವುದು ಅಮೆರಿಕ ಎಂದು ಜೀನ್ಸ್, ಡೋಮಿನೊಸ್, ಕೆಎಫ್‌ಸಿಯನ್ನು ನಿದರ್ಶನವಾಗಿ ನೀಡಿದರು.

ಚುನಾವಣೆ ಸಂದರ್ಭದಲ್ಲಿ ನಿಮ್ಮ ಸೇವೆ ಮಾಡಲು ಅವಕಾಶ ಕೊಡಿ ಎಂದು ಕೇಳುವ ರಾಜಕಾರಣಿಗಳು, ಗೆದ್ದ ನಂತರ ಅಧಿಕಾರದ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಇವತ್ತು ರಾಜಕಾರಣ ಗೌರವ ತರುವ ರೀತಿಯಲ್ಲಿ ಉಳಿದಿಲ್ಲ. ಅಧಿಕಾರ, ಹಣದಿಂದ ಬರುವ ಗೌರವ ಸರಿಯಲ್ಲ. ವ್ಯಕ್ತಿತ್ವದಿಂದ ಗೌರವ ಸಿಗುವಂತಿರಬೇಕು. ಈ ದಿಸೆಯಲ್ಲಿ ಸಿಐಟಿಬಿ ಅಧ್ಯಕ್ಷರಾಗಿ ಡಿ.ಮಾದೇಗೌಡರು ಮಾಡಿರುವ ಕಾರ್ಯ ಅನನ್ಯ ಮತ್ತು ಅದ್ಭುತ ಎಂದು ಶ್ಲಾಘಿಸಿದರು.
ಸನ್ಮಾನಿತರಾದ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಮಾತನಾಡಿ, ತಾವು ಸಿಐಟಿಬಿ ಅಧ್ಯಕ್ಷರಾಗಿದ್ದಾಗ ನಿರ್ಮಿಸಿದ್ದ ಕಟ್ಟಡದಲ್ಲಿ ಕುವೆಂಪುನಗರ ಪ್ರಥಮ ದರ್ಜೆ ಕಾಲೇಜು ನಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ರಾಗಿಣಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಕ್ಯಾತನಹಳ್ಳಿ ಎಚ್.ಪ್ರಕಾಶ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಹಾಜರಿದ್ದರು.

 

 

andolana

Recent Posts

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

7 mins ago

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

18 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

22 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

22 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

22 hours ago