ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ನಿರಂತರ ಯೋಜನೆಯಡಿ ಎರಡನೆ ಹಂತದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದರು.
ಬೆಂಗಳೂರು ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲು ವಿದ್ಯುತ್ ಮಾರ್ಗ ನಿರ್ಮಿಸುವ ವೇಳೆಯಲ್ಲಿ ಅರಣ್ಯ ಇಲಾಖೆಯಿಂದ ಮಾರ್ಗವನ್ನು ನಿರ್ಮಿಸಲು ಅನುಮತಿ ನೀಡದೆ ಇದ್ದರಿಂದ ಸದರಿ ಗ್ರಾಮಗಳಿಗೆ ಮೇ ಪಾವನಿ ಕಂಟ್ರೋಲ್ & ಪ್ಯಾನೆಲ್ ಆಂಧ್ರಪ್ರದೇಶದ Aerial Bunched cable ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ಮುಂದುವರೆದು ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 79.04 ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ ಹೂಗ್ಯಂ ಗ್ರಾಮ ಪಂಚಾಯಿತಿಯ 6ಹಳ್ಳಿಗಳ ವ್ಯಾಪ್ತಿಯ 30ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ 12 ಕಿಲೋ ಮೀಟರ್ ವಿದ್ಯುತ್ ಮಾರ್ಗವು ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುತ್ತವೆ ಹಾಗೂ ಸುಮಾರು 5 ವರ್ಷದ ಹಿಂದೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ಕೇಬಲ್‌ಗಳು ಪಂಚರಾಗಿ pot Head ಗಳು ವಿಫಲಗೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುತ್ತದೆ .ದುರಸ್ತಿ ಸಂದರ್ಭದಲ್ಲಿ ಹಾಲಿ ಇರುವ ಜಲ್ಲಿಪಾಳ್ಯ ಗ್ರಾಮಾಂತರ ಮಾರ್ಗದಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಸದರಿ ಎಬಿ ಕೇಬಲ್ ಗಳನ್ನು covered conductor ಯಿಂದ ಬದಲಾಯಿಸಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಅನುಮತಿ ದೊರೆತ ಬಳಿಕ ಸದರಿ ಕೇಬಲ್ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ರೈತರಿಗೆ ಪ್ರಸ್ತುತ ಯಾವುದೇ ತೊಂದರೆಯಾಗದಂತೆ ಸರ್ಕಾರದ ಆದೇಶದನ್ವಯ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7ಗಂಟೆ 3ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…