ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ಮಂಡಿಸಿ ಅಧ್ಯಕ್ಷ ಎಸ್.ರವಿಕುಮಾರ್ ಅವರನ್ನು ಪದಚ್ಯುತಿಗೊಳಿಸಲಾಯಿತು.
ಒಟ್ಟು ೧೯ ಸದಸ್ಯರ ಬಲ ಹೊಂದಿರುವ ಗ್ರಾ.ಪಂ.ನಲ್ಲಿ ಅಧ್ಯಕ್ಷ ಎಸ್.ರವಿಕುಮಾರ್ ಅವರ ಅತೃಪ್ತಿಕರ ಆಡಳಿತದಿಂದ ಬೇಸತ್ತು ಅವರ ವಿರುದ್ಧ ಉಪಾಧ್ಯಕ್ಷೆ ಚೈತ್ರಾ, ಸದಸ್ಯರಾದ ವಿಶಾಲಕ್ಷಿ, ಕವಿತಾ, ಪೂವಮ್ಮ, ಚಾಮದಾಸಯ್ಯ, ರೂಪಾ, ರಾಜಮ್ಮ, ಮಣಿಕಂಠಸ್ವಾಮಿ, ನಾಗರತ್ನಮ್ಮ, ಶೈಲಜಾ, ಶಂಕರ್, ಸಿ.ಶಿವಣ್ಣಗೌಡ, ಮಹಾದೇವಶೆಟ್ಟಿ ಒಳಗೊಂಡ ೧೩ ಸದಸ್ಯರು ಅವಿಶ್ವಾಸ ಮಂಡನೆಗೆ ಮುಂದಾದರು.
ಇದನ್ನು ಪರಿಶೀಲಿಸಿದ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರು ೧೩ ಮಂದಿ ಸದಸ್ಯರ ಅವಿಶ್ವಾಸ ನಿರ್ಣಯವನ್ನು ಗಣನೆಗೆ ತೆಗೆದುಕೊಂಡು ಸದಸ್ಯರಿಂದ ಮಾಹಿತಿ ಪಡೆದು ನಿಯಮದಂತೆ ಅವಿಶ್ವಾಸಕ್ಕೆ ಸಹಿ ಹಾಕಿದ್ದರು. ಅಧ್ಯಕ್ಷರಾಗಿದ್ದ ರವಿಕುಮಾರ್ ಅವರನ್ನು ವಜಾಗೊಳಿಸಿ ಉಪಾಧ್ಯಕ್ಷರಾದ ಚೈತ್ರಾ ಅವರನ್ನು ಪ್ರಭಾರ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿಡಿಒ ಚನ್ನಪ್ಪ, ಸದಸ್ಯರು ಇತರರಿದ್ದರು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…