ಜಿಲ್ಲೆಗಳು

ಹೊನ್ನೂರಿಗೆ ನಟ ಡಾಲಿ ಧನಂಜಯ್ ಭೇಟಿ

ಯಳಂದೂರು: ತಾಲ್ಲೂಕಿನ ಹೊನ್ನೂರು ಗ್ರಾಮಕ್ಕೆ ಚಿತ್ರನಟ ಡಾಲಿ ಧನಂಜಯ ಅವರು ಭೇಟಿ ನೀಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಹಾರ ಹಾಕಿ ಗೌರವ ಸಲ್ಲಿಸಿದರು.
ಸೋಮವಾರ ಕೊಳ್ಳೇಗಾಲ ಪಟ್ಟಣಕ್ಕೆ ತಮ್ಮ ನಟನೆಯ ಯಡ್‌ಬುಸ್ ಸಿನಿಮಾದ ಪ್ರಚಾರಕ್ಕಾಗಿ ಆಗಮಿಸಿದ್ದರು. ನಂತರ ಹೊನ್ನೂರು ಗ್ರಾಮಕ್ಕೆ ಭೇಟಿ ನೀಡಿದಾಗ ಅಭಿಮಾನಿಗಳು ಪಟಾಕಿ ಸಿಡಿಸಿ, ಡಾಲಿ ಡಾಲಿ ಎಂದು ಕೂಗಿ ಸಂಭ್ರಮಿಸಿದರು. ನಂತರ ಧನಂಜಯ್ ಅವರನ್ನು ಮುಖಂಡರು, ಯುವಕರು ಸನ್ಮಾನಿಸಿದರು.

ಇದೇ ವೇಳೆ ಮಾತನಾಡಿದ ಧನಂಜಯ್, ಗ್ರಾಮದಲ್ಲಿ ನಿರ್ಮಿಸಿರುವ ಬೃಹತ್ ಅಂಬೇಡ್ಕರ್ ಪ್ರತಿಮೆಯನ್ನು ವೀಕ್ಷಿಸಬೇಕೆಂಬ ಉದ್ದೇಶದಿಂದ ಆಗಮಿಸಿದ್ದೇನೆ. ಪ್ರತಿಮೆ ನೋಡಿ ಖುಷಿಯಾಯಿತು ಎಂದರು.
ಈ ಹಿಂದೆ ಚಿತ್ರನಟರಾದ ಚೇತನ್ ಅಹಿಂಸಾ, ದುನಿಯಾ ವಿಜಯ್ ಅವರು ಗ್ರಾಮಕ್ಕೆ ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆ ವೀಕ್ಷಿಸಿ ಗೌರವ ಸಮರ್ಪಣೆ ಮಾಡಿದ್ದರು.

andolanait

Recent Posts

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

8 mins ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

2 hours ago

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…

2 hours ago

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

2 hours ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

2 hours ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

3 hours ago