ಜಿಲ್ಲೆಗಳು

ರಾಹುಲ್ ಎದುರು ಹೇಗೆ ಮಾತನಾಡುತ್ತೀರಿ ? ಅವರ ಮುಂದೆ ಕಾಲಮೇಲೆ ಕಾಲು ಹಾಕಿಕೊಂಡು ಕೂತ್ಕೋತಿರೋ? ಸಿದ್ದುಗೆ ಸಚಿವ ಎಸ್‌ಟಿಎಸ್‌ ಪ್ರಶ್ನೆ

ಮೈಸೂರು: ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ ಚಾಣಕ್ಯ.ಕೇಂದ್ರದಲ್ಲಿ ಇರೋದು ನಮ್ಮದೇ ಸರ್ಕಾರ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಹೆದರಿಕೆ ಏಕೆ? ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದರು.

ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ಬುಧವಾರ ನರಸಿಂಹ ರಾಜ ವಿಧಾನಸಭಾ ಕ್ಷೇತ್ರದ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿಗಳಿಗೆ ಏನು ಗೌರವ ಕೊಡಬೇಕು, ಪ್ರಧಾನಿ ಸ್ಥಾನಕ್ಕೆ ಏನು ಗೌರವ ಕೊಡಬೇಕೋ ಅದನ್ನು ಮುಖ್ಯಮಂತ್ರಿಗಳು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ನಾನು ಒಂದು ಕೇಳುತ್ತೇನೆ. ರಾಹುಲ್ ಗಾಂಧಿ ಅವರು ನಿಮಗಿಂತ ಜ್ಯೂನಿಯರಾ? ಸೀನಿಯರಾ? ರಾಹುಲ್ ಗಾಂಧಿ ಮುಂದೆ ನೀವು ಹೇಗೆ ಮಾತನಾಡುತ್ತೀರಿ? ಅವರ ಮುಂದೆ ಕಾಲಮೇಲೆ ಕಾಲು ಹಾಕಿಕೊಂಡು ಕೂತ್ಕೋತಿರೋ? ಎಂದು ಕೇಳಿದರು.

ಸಿದ್ದರಾಮಯ್ಯ ಅವರೂ ಮುಖ್ಯಮಂತ್ರಿ ಆಗಿದ್ದವರು, ಐದು ವರ್ಷ ಆಡಳಿತ ಮಾಡಿದ್ದವರು. ಕೋವಿಡ್ ಬಂದ ಮೇಲೆ ಏನೇನೋ ಮಾತನಾಡೋದಲ್ಲ ಸಿಎಂ ಅವರ ಬಗ್ಗೆ ನೀಡಿರುವ ಹೇಳಿಕೆ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದು ಎಸ್‌ಟಿಎಸ್ ಹೇಳಿದರು. ಕೋವಿಡ್ ಗೆ ಮುಂಚೆ ಸಿದ್ದರಾಮಯ್ಯ ಚೆನ್ನಾಗಿದ್ದರು. ಎರಡು ಬಾರಿ ಕೋವಿಡ್ ಬಂದ ಮೇಲೆ ಇಂಜೆಕ್ಷನ್ ತೆಗೆದುಕೊಳ್ಳಿ ಎಂದು ಹೇಳಿದೆ. ಯಾಕೋ ಇತ್ತೀಚೆಗೆ ಏನೇನೋ ಮಾತನಾಡುತ್ತೀರಿ, ಬೂಸ್ಟ್ ಡೋಸ್ ತೆಗೆದುಕೊಳ್ಳಿ ಸಿದ್ದರಾಮಯ್ಯ ಅವರೇ ಎಂದು ಹೇಳಿದೆ. ಡಾ.ಸುಧಾರ್ಕ ಅವರಿಗೆ ಹೇಳಿ ಡೋಸ್ ಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಕಟಕಿಯಾಡಿದರು.

ನರಸಿಂಹರಾಜ ಕ್ಷೇತ್ರದ ವಾರ್ಡ್ ನಂರ್ಬ ೩೦ ರಿಂದ ವಿಜಯ ಸಂಕಲ್ಪ ಆರಂಭವಾಗಿದೆ. ಈ ಬಾರಿ ಈ ಕ್ಷೇತ್ರದಿಂದ ನೂರಕ್ಕೆ ನೂರರಷ್ಟು ಬಿಜೆಪಿ ಶಾಸಕರು ಆಯ್ಕೆಯಾಗಲಿದ್ದಾರೆ. ಶಾಸಕರ ಆಯ್ಕೆ ಹಿಂದೆ ಕಾರ್ಯಕರ್ತರ ಶ್ರಮ ಅಡಗಿದೆ ಎಂದು ಹೇಳಿದರು.ಐದು ವರ್ಷದಲ್ಲಿ ಕೇಂದ್ರ ಮತ್ತು ರಾಜ್ಯದ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಬೇಕು. ಬೂತ್ ಮಟ್ಟದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಶ್ತೀವತ್ಸ, ಮಾಜಿ ಮೇಯರ್ ಸಂದೇಶ್ ಸ್ವಾಮಿ, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷರಾದ ಭಾನುಪ್ರಕಾಶ್, ಮಾಜಿ ಶಾಸಕರಾದ ನಂಜುಂಡಸ್ವಾಮಿ, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

andolanait

Recent Posts

ಕಾರು ಚಾಲಕನ ಕಣ್ಣಿಗೆ ಕಾರದಪುಡಿ ಎರಚಿ ನಗದು ದರೋಡೆ

ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ…

2 hours ago

ಥಿಯೇಟರ್‌ನಲ್ಲಿ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್‌ಗೆ ನೋಟಿಸ್‌

ಹೈದರಾಬಾದ್:‌ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್‌ ನೀಡಲಾಗಿದೆ. ನಾಳೆ ಬೆಳಿಗ್ಗೆ 11…

3 hours ago

ಮಾಜಿ ಸಿಎಂ ಎಸ್.ಎಂ.ಕೃಷ್ಣ ಮನೆಗೆ ಯಶ್‌ ದಂಪತಿ ಭೇಟಿ

ಬೆಂಗಳೂರು: ನಟ ಯಶ್‌ ಹಾಗೂ ಪತ್ನಿ ರಾಧಿಕಾ ಪಂಡಿತ್‌ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…

4 hours ago

ಬಾಲಿವುಡ್‌ ಖ್ಯಾತ ನಿರ್ದೇಶಕ ಶ್ಯಾಮ್‌ ಬೆನಗಲ್‌ ವಿಧಿವಶ

ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್‌ ಬೆನಗಲ್‌ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…

4 hours ago

ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಮದುವೆಯ ಫೋಟೋಗಳು ವೈರಲ್‌

ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…

4 hours ago

ರೈಲ್ವೆ ಹುದ್ದೆ ಪಡೆಯಲು ಕನ್ನಡಿಗರು ಆಸಕ್ತಿ ತೋರುತ್ತಿಲ್ಲ: ಸಚಿವ ವಿ.ಸೋಮಣ್ಣ

ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…

5 hours ago