ಮೈಸೂರು: ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ ಚಾಣಕ್ಯ.ಕೇಂದ್ರದಲ್ಲಿ ಇರೋದು ನಮ್ಮದೇ ಸರ್ಕಾರ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಹೆದರಿಕೆ ಏಕೆ? ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದರು.
ನರಸಿಂಹರಾಜ ಕ್ಷೇತ್ರದ ವಾರ್ಡ್ ನಂರ್ಬ ೩೦ ರಿಂದ ವಿಜಯ ಸಂಕಲ್ಪ ಆರಂಭವಾಗಿದೆ. ಈ ಬಾರಿ ಈ ಕ್ಷೇತ್ರದಿಂದ ನೂರಕ್ಕೆ ನೂರರಷ್ಟು ಬಿಜೆಪಿ ಶಾಸಕರು ಆಯ್ಕೆಯಾಗಲಿದ್ದಾರೆ. ಶಾಸಕರ ಆಯ್ಕೆ ಹಿಂದೆ ಕಾರ್ಯಕರ್ತರ ಶ್ರಮ ಅಡಗಿದೆ ಎಂದು ಹೇಳಿದರು.ಐದು ವರ್ಷದಲ್ಲಿ ಕೇಂದ್ರ ಮತ್ತು ರಾಜ್ಯದ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಬೇಕು. ಬೂತ್ ಮಟ್ಟದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಶ್ತೀವತ್ಸ, ಮಾಜಿ ಮೇಯರ್ ಸಂದೇಶ್ ಸ್ವಾಮಿ, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷರಾದ ಭಾನುಪ್ರಕಾಶ್, ಮಾಜಿ ಶಾಸಕರಾದ ನಂಜುಂಡಸ್ವಾಮಿ, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…