ಮೈಸೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡದ ಮೊತ್ತವನ್ನು ಬಾಕಿ ಉಳಿಸಿಕೊಂಡವರಿಗೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ.
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಫೆ.೧೧ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ
ಶೇ.೫೦ ಅನ್ನು ರಿಯಾಯಿತಿ ನೀಡಲಾಗಿದ್ದು, ಆದ್ದರಿಂದ ಮೈಸೂರು ನಗರ ಸಂಚಾರ ಪೊಲೀಸರಿಂದ ಸಂಚಾರ ಇ-ಚಲನ್ ಪಡೆದು ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಈ ಸದಾವಕಾಶವನ್ನು ಬಳಸಿಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಗರ ಪೊಲೀಸರು ತಿಳಿಸಿದ್ದಾರೆ.
ಮೈಸೂರು ನಗರದ ಎಲ್ಲ ಸಂಚಾರ ಪೊಲೀಸ್ ಠಾಣೆಗಳಲ್ಲಿ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ, ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್‌ನಲ್ಲಿ. ವಾಹನ ಪರಿಶೀಲನೆ ಮಾಡುವ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ, ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡಬಹುದು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…