ಜಿಲ್ಲೆಗಳು

ಪರಿಸರ ಏರುಪೇರಿಗೆ ಮನುಷ್ಯರೇ ಕಾರಣ: ರವಿ ಕಾಳಪ್ಪ

ಮಡಿಕೇರಿ: ಪ್ರಕೃತಿ ಆರೋಗ್ಯಯುತವಾಗಿರಬೇಕಾದರೆ ನಮ್ಮೆಲ್ಲರ ಮೇಲೆ ಹೊಣೆಗಾರಿಕೆ ಹೆಚ್ಚಿರುತ್ತದೆ. ಪ್ರಾಣಿ, ಪಕ್ಷಿಗಳು ಹಾಗೂ ಇತರೆ ಜೀವ ಜಂತುಗಳಿದ್ದರೆ ಮಾತ್ರ ಪರಿಸರ ಸಮತೋಲನದಿಂದ ಕೂಡಿರುತ್ತದೆ. ಪ್ರಸ್ತುತ ದಿನಗಳಲ್ಲಿ ವಾತಾವರಣದಲ್ಲಿನ ಏರುಪೇರಿಗೆ ಮನುಷ್ಯರೇ ಕಾರಣ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದರು.

ಅರಣ್ಯ ಇಲಾಖೆ, ಮಡಿಕೇರಿ ವನ್ಯಜೀವಿ ವಿಭಾಗ, ಭಾಗಮಂಡಲ ವಲಯ ವನ್ಯಜೀವಿ ವಿಭಾಗದ ಸಹಯೋಗದಲ್ಲಿ ವನ್ಯಜೀವಿ ಸಪ್ತಾಹ ಅಂಗವಾಗಿ ತಲಕಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರೂ ದಿನದಲ್ಲಿ ಐದು ನಿಮಿಷ ಸಮಯವನ್ನು ಪರಿಸರ ಸ್ವಚ್ಛತೆಗಾಗಿ ಮೀಸಲಿಡಬೇಕು. ಎಲ್ಲರೂ ಕೈಜೋಡಿಸಿದಾಗ ವಾತಾವರಣ ಸ್ವಚ್ಛಂದವಾಗಿರುತ್ತದೆ. ನಾವು ಜಾಗೃತರಾಗುವ ಜತೆಗೆ ಸ್ವಚ್ಛತೆ ಬಗ್ಗೆ ಇತರರಿಗೆ ಅರಿವು ಮೂಡಿಸಬೇಕು ಎಂದು ತಿಳಿ ಹೇಳಿದರು.

ಬಳಿಕ ತಲಕಾವೇರಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ರವಿ ಕಾಳಪ್ಪ ಪಾಲ್ಗೊಂಡರು. ಈ ವೇಳೆ ಕ್ಷೇತ್ರಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಯಿತು. ಅರಣ್ಯ ರಕ್ಷಕರು, ಇಲಾಖೆ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಎಸಿಎಫ್ ಶ್ರೀನಿವಾಸ್, ಆರ್‌ಎಫ್‌ಒ ಕೊಟ್ರೇಶ್, ಡಿಆರ್‌ಎಫ್‌ಒಗಳಾದ ಆನಂದ್, ಶ್ರೀಧರ್, ರಾಜ್ಯ ವಿಜ್ಞಾನ ಪರಿಷತ್‌ನ ಟಿ.ಜಿ.ಪ್ರೇಮ್ ಕುವಾರ್ ಹಾಜರಿದ್ದರು.

ತಲಕಾವೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ನಾಪಂಡ ರವಿ ಕಾಳಪ್ಪ ಚಾಲನೆ ನೀಡಿದರು. ಶ್ರೀನಿವಾಸ್, ಕೊಟ್ರೇಶ್, ಆನಂದ್, ಶ್ರೀಧರ್, ಟಿ.ಜಿ.ಪ್ರೇಮ್ ಕುಮಾರ್ ಮತ್ತಿತರರಿದ್ದರು

andolana

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

3 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

3 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

3 hours ago