ಬೆಳಗಾವಿ-ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರು ಹಾಸಿಗೆಗಳ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಇನ್ನೇಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು.
ಶಾಸಕ ಮಂಜುನಾಥ್ ಎಚ್.ಪಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಆಸ್ಪತ್ರೆ ಹಿಂದೆಯೇ ಉದ್ಘಾಟನೆಗೊಳ್ಳಬೇಕಿತ್ತು. ಆದರೆ, ಹೆಚ್ಚುವರಿ ಕಾಮಗಾರಿ ನಡೆಸುತ್ತಿರುವ ಕಾರಣ ವಿಳಂಬವಾಗಿದೆ. 9.95ಕೋಟಿ ಪರಿಷ್ಕøತ ಅಂದಾಜು ಮೊತ್ತದ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಅಲ್ಲಿಂದ ಅನುಮತಿ ಸಿಕ್ಕರೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವುದಾಗಿ ತಿಳಿಸಿದರು.
ಈ ಮೊದಲು 12-12-2018ರಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿತ್ತು. ಆರ್‍ಐಡಿಎಫ್ ನಬಾರ್ಡ್ 23 ಯೋಜನೆಯಡಿ 25 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿತ್ತು. ಅರುಣಾ ಕನ್ಸ್‍ಟ್ರಕ್ಷನ್ ಪ್ರವೈಟ್ ಲಿಮಿಟೆಡ್ ಇವರಿಗೆ ಟೆಂಡರ್ ನೀಡಾಗಿದ್ದು, 18 ತಿಂಗಳು ಕಾಲಾವಧಿಯೊಳಗೆ ಕಾಮಗಾರಿ ಮುಗಿಸಲು ಸೂಚಿಸಲಾಗಿತ್ತು. ಆದರೆ, ಮಳೆಗಾಳ ಬಂದ ಕಾರಣ ವಿಳಂಬವಾಗಿದೆ. ಪುನಃ ಇದರ ಕಾಗಮಾರಿ ಪರಿಷ್ಕರಿಸಿ 31.15 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ನೆಲಮಹಡಿ , ಮೊದಲನೆ ಮಹಡಿ, ಎರಡನೇ ಮಹಡಿ, ಛಾವಣಿ, ವಿದ್ಯುತ್ ಲೈನ್, ಸ್ಯಾನಿಟರಿ, ನೀರು ಸರಬರಾಜು ಪೂರ್ಣಗೊಂಡಿದೆ. ಎಡನೇ ಮಹಡಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಆಸ್ಪತ್ರೆಗೆ ಒಟ್ಟು 94 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಒಂದು ವೇಳೆ ಸಿಬ್ಬಂದಿ ಕೊರತೆ ಇದ್ದರೆ ಹೊರ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲು ಡಿಸಿಗೆ ಅಧಿಕಾರ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್‍ನ ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ ಅವರು, ಉತ್ತರ ಕನ್ನಡ ಜಿಲ್ಲೆಗೆ ನೀರು ಘೋಷಣೆ ಮಾಡಿದಂತೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಈಗಾಗಲೇ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವಂತೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಶೀಘ್ರದಲ್ಲೇ ಅಧಿಕೃತ ಆದೇಶ ಹೊರಿಡುಸುವುದಾಗಿ ಭರವಸೆ ಕೊಟ್ಟರು.
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…