ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಆನೆ ದಾಳಿಗೆ ಸಿಲುಕಿ ಮಹಿಳೆ ಚಿಕ್ಕಮ್ಮ (60) ಮೃತಪಟ್ಟಿದ್ದು ನಂತರ ಇದೇ ಆನೆ ಬಿಳಿಕೆರೆ ಗ್ರಾಮದ ರವಿ ಎಂಬುವರ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದೆ.
ಚಿಕ್ಕಬೀಚನಹಳ್ಳಿಯ ಸಿದ್ದೇಗೌಡ ಅವರು ಪತ್ನಿ ಚಿಕ್ಕಮ್ಮ ಅವರೊಂದಿಗೆ ಬೆಳಿಗ್ಗೆ ಹುರುಳಿ ಕಣದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ. ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬವರ ಮೇಲು ಆನೆ ದಾಳಿ ಮಾಡಿದೆ.
ಮೃತ ಕುಟುಂಬಸ್ಥರ ಮನೆಗೆ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…