ಘಟನೆ ವಿವರ : ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಕುಮಾರ್ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದ, ಅದರಂತೆ ಡಿ.27 ರಂದು ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಇದೇ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಆರೋಗ್ಯ ಸ್ವಾಮಿ ದೂರವಾಣಿ ಕರೆ ಮಾಡಿ ನೀನೊಬ್ಬನೇ ಜಮೀನಿನ ಬಳಿಗೆ ಬಾ ಎಂದು ತಿಳಿಸಿದ್ದಾನೆ ಈ ಸಂದರ್ಭದಲ್ಲಿ ತನ್ನ ಟಿವಿಎಸ್ ಬೈಕ್ ನಲ್ಲಿ ಪ್ರತಾಪ್ ರವರ ಜಮೀನಿಗೆ ತೆರಳಿದ್ದಾನೆ. ಆನಂತರ ವಾಪಸ್ ಮನೆಗೆ ಬಾರದಿದ್ದರಿಂದ ಜಮೀನಿಗೆ ಹೋಗಿ ನೋಡಿದ ವೇಳೆ ಅಂಗಾತವಾಗಿ ಸತ್ತು ಬಿದ್ದಿದ್ದ ಎಂದು ಮೃತ ಕುಮಾರನ ಸಹೋದರ ಮಾದೇಶ್ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲ ನಡೆಸಿ ಕೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಾಸಕ ನರೇಂದ್ರ ಭೇಟಿ : ಅಲಗೂ ಮೂಲೆ ಗ್ರಾಮದಲ್ಲಿ ಕೊಲೆಯಾಗಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಶಾಸಕ ಆರ್ ನರೇಂದ್ರ ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಗುರುಮಲ್ಲಪ್ಪ ರವರಿಗೆ ಸಾಂತ್ವನ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಮಾತನಾಡಿ ಮೃತಪಟ್ಟಿರುವ ಕುಮಾರರವರು ಕೊಲೆಯಾಗಿದ್ದಾರೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಿನ್ನೆಲೆ ಸ್ಥಳ ಪರಿಶೀಲನೆ ಮಾಡಿಸಿ ತನಿಖೆ ಚುರುಕುಗೊಳಿಸಿ ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವೃತ್ತ ನಿರೀಕ್ಷಕ ಸಂತೋಷ ಕಶ್ಯಪ ರವರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…