ಡಿಸೆಂಬರ್ 20ರಂದು ಗುಂಡ್ಲುಪೇಟೆಯ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರ ಬಳಿ ಬಂದಿದ್ದ ಅಪರಿಚಿತ ಮಹಿಳೆ ತನ್ನ ಬಳಿ ಇದ್ದ ಹೆಣ್ಣು ಮಗುವನ್ನು ಕೊಟ್ಟು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಣ್ಮರೆಯಾಗಿದ್ದರು. ಅತ್ತ ಮಗು ಪಡೆದ ವೃದ್ಧೆ ಮಹಿಳೆ ಬಾರದ್ದನ್ನು ಕಂಡು ಕಂಡಕ್ಟರ್ ಓರ್ವರಿಗೆ ಮಗುವನ್ನು ನೀಡಿದ್ದರು.
ಬಳಿಕ ಮಹಿಳೆ ಮಗು ಬಿಟ್ಟು ಹೋಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿತ್ತು. ವಿಡಿಯೊ ಮೂಲಕ ಸಂಬಂಧಪಟ್ಟವರು ಬಂದು ಮಗುವನ್ನು ಪಡೆದುಕೊಳ್ಳಬೇಕು ಎಂದೂ ಸಹ ಹೇಳಲಾಗಿತ್ತು. ಪೊಲೀಸರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ಮಗುವನ್ನು ಸ್ಥಳೀಯ ಸಿಎಂಎಸ್ ಅನಾಥಾಲಯದಲ್ಲಿ ಇರಿಸಲಾಗಿತ್ತು. ನಂತರ ಜಿಲ್ಲಾ ಮಕ್ಕಳ ಸಮಿತಿಯವರು ಮಗುವನ್ನು ಕೊಳ್ಳೇಗಾಲದ ಜೀವನ್ ಜ್ಯೋತಿ ಟ್ರಸ್ಟ್‌ಗೆ ಹಸ್ತಾಂತರಿಸಿದ್ದರು.
ವೈರಲ್ ಆದ ವಿಡಿಯೊ ಕಂಡ ಬಳಿಕ ಭಾನುವಾರ ಹಾಸನದಿಂದ ಕೊಳ್ಳೇಗಾಲಕ್ಕೆ ಬಂದ ಮಗುವಿನ ತಂದೆ ಮಗುವಿನ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…