ಮೈಸೂರು: ವಿಜಯನಗರ ಮೂರನೇ ಹಂತದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಸುತ್ತೂರುಮಠದ ಶ್ರೀಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ನೆರವೇರಿಸಿದರು. ಕಟ್ಟಡವನ್ನು ಟೇಪು ಕತ್ತರಿಸಿ ಉದ್ಘಾಟಿಸಿ ಜ್ಯೋತಿಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು.
ಸೋಲೂರು ರೇಣುಕಾಪೀಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಸಾನ್ನಿಧ್ಯವನ್ನು ವಹಿಸಿದ್ದರು. ಅಧ್ಯಕ್ಷತೆಯನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಡಾ.ಎಂ.ಕೆ.ಪೋತರಾಜ್ ವಹಿಸಿದ್ದರು. ಶಾಸಕ ಜಿ.ಟಿ.ದೇವೇಗೌಡ,
ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಡಾ.ಎಂ.ತಿಮ್ಮೇಗೌಡ, ಉಪಾಧ್ಯಕ್ಷ ಟಿ.ಶಿವಕುಮಾರ್, ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ವೇದಕುಮಾರ್,ಮೈಸೂರು ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷ ಸರೋಜಮ್ಮ ಪಾಪೇಗೌಡ
ಸಂಘದ ಉಪಾಧ್ಯಕ್ಷ ರಾಜಶೇಖರ ಕದಂಬ ಇನ್ನಿತರರು ಹಾಜರಿದ್ದರು. ಕುಮಾರಿ ಅನನ್ಯ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು



