Mysore
27
scattered clouds

Social Media

ಭಾನುವಾರ, 25 ಜನವರಿ 2026
Light
Dark

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ: ಸಿ.ಎಂ.ಸಿದ್ದರಾಮಯ್ಯ

ನಂಜನಗೂಡು: ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು ಎಂದು ಕಿವಿಮಾತು ಹೇಳಿದರು. ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.

ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!