ಚಾಮರಾಜನಗರ : ಹೈಕೋರ್ಟ್ ಆದೇಶದಂತೆ ಉಮ್ಮತ್ತೂರು ಶ್ರೀ ಉರುಕಾತೇಶ್ವರಿ ದೇವಸ್ಥಾನ ದ ಕೀಲಿಕೈ ಹಾಗೂ ಬ್ಯಾಂಕ್ ಖಾತೆಯನ್ನು ನಿರ್ವಹಿಸುವ ಅಧಿಕಾರವನ್ನು ತಾಲೂಕು ಆಡಳಿತ ನೀಡದಿದ್ದರೆ ಮಂಗಳವಾರ ನ್ಯಾಯಾಲಯದ ಆದೇಶದಂತೆ ದೇವಸ್ಥಾನ ಬೀಗ ಹೊಡೆದು ಪೂಜೆ ಸಲ್ಲಿಸುವುದಾಗಿ ಶ್ರೀ ಉರುಕಾತೇಶ್ವರಿ ಅಮ್ಮನವರ ದೇವಸ್ಥಾನ ಮಂಡಳಿ ಅಧ್ಯಕ್ಷ ಎಸ್.ಗುರುಮಲ್ಲಪ್ಪ ಎಚ್ಚರಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದ ಅವರು, ಆಡಳಿತ ಮಂಡಳಿ ವಶದಲ್ಲಿದ್ದ ದೇವಸ್ಥಾನ ವನ್ನು ಜಿಲ್ಲಾಡಳಿತ ವಶಪಡಿಸಿಕೊಂಡು ಮುಜರಾಯಿಗೆ ವಹಿಸಿತ್ತು. ಶ್ರೀ ಉರುಕಾತೇಶ್ವರಿ ಅಮ್ಮನವರ ಭಕ್ತರ ಆಶಯದಂತೆ ಟ್ರಸ್ಟ್ ರಚನೆ ಮಾಡಿಕೊಂಡು ಯಾವುದೇ ಲೋಪವಿಲ್ಲದೆ.
ಭ್ರಷ್ಟಾಚಾರ ಇಲ್ಲದೆ, ಹಣ ದುರುಪಯೋಗ ಮಾಡದೆ ನಿರ್ವಹಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಜಿಲ್ಲಾಡಳಿತ ಕೆಲವರ ಮಾತು ಕೇಳಿ ಟ್ರಸ್ಟ್ ವಶದಲ್ಲಿದ್ದ ದೇವಸ್ಥಾನವನ್ನು ಸರ್ಕಾರ ಮುಜುರಾಯಿ ಇಲಾಖೆಗೆ ಸೇರ್ಪಡೆ ಮಾಡಿಕೊಂಡಿತ್ತು.
ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೋರೆ ಹೋಗಿದ್ದು ನ್ಯಾಯಾಲಯವು ಸದರಿ ರಿಟ್ ಪಿಟಿಷನ್ ಸಂಖ್ಯೆ ಡಬ್ಲ್ಯೂ ಪಿ ೬೯೫೬/೨೦೨೨ ರಲ್ಲಿ ಪ್ರಕರಣ ದಾಖಲು ಮಾಡಿಕೊಂಡು ವಾದವಿವಾದ ಆಲಿಸಿ ಅಂತಿಮವಾಗಿ ೨೦೨೪ ಜ.೧೮ ರಂದು ಆದೇಶ ಹೊರಡಿಸಿ, ಮುಜರಾಯಿ ಇಲಾಖೆಯ ಆಯುಕ್ತರು ಹೊರಡಿಸಿರುವ ಆದೇಶವನ್ನು ರದ್ದುಪಡಿಸಿದೆ.
ನ್ಯಾಯಾಧೀಶರ ಆದೇಶದಂತೆ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನವನ್ನು ತಕ್ಷಣದಿಂದಲ್ಲೇ ಜಾರಿಗೆ ಬರುವಂತೆ ಉರುಕಾತೇಶ್ವರಿ ಅಮ್ಮನವರ ದೇವಸ್ಥಾನ ಮಂಡಳಿಗೆ ಹಸ್ತಾಂತರ ಮಾಡಬೇಕು ಎಂದು ಗುರುಮಲ್ಲಪ್ಪ ತಿಳಿಸಿದರು.
ಉಚ್ಚ ನ್ಯಾಯಾಲಯವು ದೇವಸ್ಥಾನ ಕೀಲಿಕೈ, ಸಂಗ್ರಹವಾಗಿರುವ ಕಾಣಿಕೆ, ಹುಂಡಿ ಹಣ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ ಇನ್ನಿತರ ವಸ್ತುಗಳನ್ನು ಹಾಗೂ ದೇವಸ್ಥಾನದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಟ್ರಸ್ಟ್ ನವರಿಗೆ ನೀಡಬೇಕೆಂದು ಆದೇಶವಾಗಿದೆ.
ಅದರಂತೆ ಈಗಾಗಲೇ ಟ್ರಸ್ಟ್ ಅಧ್ಯಕ್ಷರು, ಹಾಗೂ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನು ಭೇಟಿ ನ್ಯಾಯಾಲಯದ ಅದೇಶ ಪ್ರತಿಯೊಂದಿಗೆ ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದೇವೆ.
ನಮ್ಮ ಮನವಿ ಹಾಗೂ ಹೈಕೋರ್ಟ್ ಅದೇಶದಂತೆ ಅಪರ ಜಿಲ್ಲಾಧಿಕಾರಿಗಳು ಜ.೨೯ ರಂದೇ ತಹಸೀಲ್ದಾರ್ ಅವರಿಗೆ ಪತ್ರ ಬರೆದು ಉಮ್ಮತ್ತೂರು ದೇವಸ್ಥಾನದ ಕೀಲಿಕೈ, ದೇವಸ್ಥಾನ ಬ್ಯಾಂಕ್ ಖಾತೆಯನ್ನು ನಿರ್ವಹಿಸಲು ಟ್ರಸ್ಟ್ವರಿಗೆ ನೀಡುವಂತೆ ತಹಸೀಲ್ದಾರ್ ಅವರಿಗೆ ಸೂಚನೆ ಕೊಟ್ಟಿದ್ದಾರೆ ಎಂದರು.
ಅದರೆ, ತಹಶೀಲ್ದಾರ್ ಹೈಕೋರ್ಟ್ ಅದೇಶದಂತೆ ದೇವಸ್ಥಾನದ ನಿರ್ವಹಣೆಯ ಜವಾಬ್ದಾರಿಯನ್ನು ಟ್ರಸ್ಟ್ ಪದಾಧಿಕಾರಿಗಳಿಗೆ ವಹಿಸಬೇಕಾಗಿತ್ತು. ಆದರೆ, ಇದುವರೆಗೆ ಮೀನಾಮೇಷ ಎನ್ನಿಸುತ್ತಿದ್ದು, ಜಿಲ್ಲಾಧಿಕಾರಿಗಳು ಹಾಗೂ ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ದಿಕ್ಕು ತಪ್ಪಿಸುತ್ತಿದ್ದಾರೆ.
ಇನ್ನು ಮೂರು ದಿನಗಳ ಅವಧಿಯಲ್ಲಿ ದೇವಸ್ಥಾನದ ಸಂಪ್ರಾದಾಯದಂತೆ ಪ್ರತಿ ತಿಂಗಳ ಮೊದಲ ಮಂಗಳವಾರ ದೇವಸ್ಥಾನದ ಬಾಗಿಲು ತೆರೆದು ಪೂಜೆ ಸಲ್ಲಿಸಿ, ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕಾಗಿದೆ. ಈ ಎಲ್ಲಾ ಪ್ರಕ್ರಿಯೆಯು ಹೈಕೋರ್ಟ್ ಆದೇಶದಂತೆ ಟ್ರಸ್ಟ್ ನಡೆಸಬೇಕಾಗಿದೆ.
ಹೀಗಾಗಿ ತಹಶೀಲ್ದಾರ್ ತಕ್ಷಣ ಬೀಗ ನೀಡಿ, ದೇವಸ್ಥಾನದ ಸಂಪೂರ್ಣ ಹೊಣೆಗಾರಿಕೆಯನ್ನು ಟ್ರಸ್ಟ್ ಅಧ್ಯಕ್ಷರಿಗೆ ಹಸ್ತಾಂತರ ಮಾಡಬೇಕು. ಇಲ್ಲದಿದ್ದರೆ ಮಂಗಳವಾರ ಟ್ರಸ್ಟ್ ಅಧ್ಯಕ್ಷರು ಹಾಗೂ ಪದಾಧಿಕರಿಗಳು ದೇವಸ್ಥಾನದ ಬೀಗ ಹೊಡೆಯಬೇಕಾಗುತ್ತದೆ. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ತಹಶೀಲ್ದಾರ್ ನೇರ ಹೊಣೆಗಾರರಾಗುತ್ತಾರೆ ಎಂದು ಎಸ್. ಗುರುಮಲ್ಲಪ್ಪ ಎಚ್ಚರಿಸಿದರು.
ಗೋಷ್ಠಿಯಲ್ಲಿ ಟ್ರಸ್ಟ್ನ ಕಾರ್ಯದರ್ಶಿ ಸಿದ್ದರಾಜಪ್ಪ, ಖಜಾಂಚಿ ಎಂ. ರಾಜೇಶ್, ಟ್ರಸ್ಟಿಗಳಾದ ಮಹದೇವಸ್ವಾಮಿ, ಕೆ. ರಾಮಣ್ಣ, ಎಸ್.ಉಮೇಶ್, ಲೋಕೇಶ್, ಸಿದ್ದಪ್ಪ, ಗ್ರಾಮದ ಮುಖಂಡರು ಇದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…