ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಜರಬಾದ್ ಪೊಲೀಸ್ ಠಾಣೆಯ ಮಹಿಳಾ ಪೇದೆ ಗೀತಾ ಎಂಬುವವರು ನೇಣಿಗೆ ಶರಣಾಗಿದ್ದಾರೆ.
ನಗರದ ಕೆಎಸ್‌ಆರ್‌ಪಿ ಕ್ವಾರ್ಟರ್ಸ್‌ನಲ್ಲಿ ಘಟನೆ ನಡೆದಿದೆ. ಗೀತಾ ಅವರು ನಜರಬಾದ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದು,12 ಗಂಟೆ ಸುಮಾರಿಗೆ ಅನಾರೋಗ್ಯದ ಕಾರಣ ಹೇಳಿ ಮನೆಗೆ ತೆರಳಿದ್ದಾರೆ.
ತಮ್ಮ ಪತಿಯನ್ನು ಸಮೀಪದ ಎಟಿಎಂನಲ್ಲಿ ಹಣ ತರುವಂತೆ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೀತಾ ಅವರ ಪೋನ್‌ಗೆ ಒಟಿಪಿ ಬಂದಿದ್ದು, ಅವರ ಪತಿ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ನಂತರ ಮನೆಗೆ ಬಂದು ನೋಡಿದಾಗ ಪತ್ನಿ ಗೀತಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…
ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…
ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…
ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…